Praveen Chandra Puttur

ಬೆಂಗಳೂರಿನಲ್ಲಿ ಪ್ರಮುಖ ದಿನಪತ್ರಿಕೆಯೊಂದರಲ್ಲಿ ಫುಲ್ ಟೈಂ ಹಿರಿಯ ಉಪಸಂಪಾದಕ. ಪಾರ್ಟ್ ಟೈಂ ಇಂಗ್ಲಿಷ್ ಟು ಕನ್ನಡ ಅನುವಾದಕ. ಸಮಯ ಸಿಕ್ಕಾಗ ವೆಬ್ ಸೈಟ್ ರಚನೆ, ವೆಬ್ ಸೈಟ್ ವಿನ್ಯಾಸ. ಜೊತೆಗೆ ಕರ್ನಾಟಕಬೆಸ್ಟ್.ಕಾಂನ ಸ್ಥಾಪಕ  ಓದುವುದು, ಬರೆಯುವುದು ಇಷ್ಟದ ಕೆಲಸ. ಹೆಚ್ಚಿನ ವಿವರಕ್ಕೆ ನನ್ನ ಬಗ್ಗೆ ಪುಟವನ್ನು ನೋಡಿ

Author Archives: Praveen Chandra Puttur

ಕನಕಮಜಲು: ಕರಾವಳಿಯಲ್ಲೊಂದು ಕಲಾಗ್ರಾಮ

ಕರಾವಳಿ ಸೇರಿದಂತೆ ಕರ್ನಾಟಕದಲ್ಲಿ ಗ್ರಾಮಕ್ಕೊಂದು ಯುವಕಮಂಡಲ-ಯುವತಿ ಮಂಡಲಗಳು ಸಾಮಾನ್ಯ. ಪ್ರತಿ ಯುವ ಸಂಘಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಅಂತಹ ವ್ಯತ್ಯಾಸಗಳು ಇರುವುದಿಲ್ಲ. ಆಗಾಗ ಗ್ರಾಮೀಣ ನಾಟಕ, ಯಕ್ಷಗಾನ, ಹಾಡು ನೃತ್ಯ, ಒಂದಿಷ್ಟು ಗ್ರಾಮೀಣ ಕ್ರೀಡೆಗಳು, ಶ್ರಮದಾನ…. ಹೀಗೆ ಒಂದೇ ತೆರನಾದ ಚಟುವಟಿಕೆಗಳು. ನನ್ನ ಪಕ್ಕದೂರು ಕನಕಮಜಲು ಹಾಗಲ್ಲ. ನನ್ನ ಕಾಲೇಜು ದಿನಗಳಲ್ಲಿಯೇ ವಿನೂತನ ಕಾರ್ಯಕ್ರಮಗಳಿಂದ ಗಮನಸೆಳೆಯುತ್ತಿತ್ತು.ಊರು ಬಿಟ್ಟು ಬಂದು ಹತ್ತು ವರ್ಷ ಕಳೆದರೂ ಅಲ್ಲಿ ನಡೆಯುವ ವಿಶೇಷ ಕಾರ್ಯಕ್ರಮಗಳ ಸುದ್ದಿ ಸುದ್ದಿಪತ್ರಿಕೆಗಳಮೂಲಕವೇ ನನಗೆ ತಲುಪುತ್ತಿದೆ. ಇತ್ತೀಚೆಗೆ ಅಲ್ಲಿ ಕಲಾ ಕಾರ್ಯಕ್ರಮವೊಂದು ನಡೆದಾಗ ಆ… Read More »

ನೀತಿಕತೆ: ಪರೀಕ್ಷೆ ತಪ್ಪಿಸಿದ ಹುಡುಗರು

ನಾಲ್ವರು ಕಾಲೇಜು ಹುಡುಗರಿದ್ದರು. ಅವರಿಗೆ ಮರುದಿನ ಪರೀಕ್ಷೆ ಇತ್ತು. ಆದರೆ, ಹಿಂದಿನ ದಿನ ಸ್ನೇಹಿತನ ಹುಟ್ಟುಹಬ್ಬವೆಂದು ಮಧ್ಯರಾತ್ರಿಯವರೆಗೆ ಪಾರ್ಟಿ ಮಾಡಿದರು. ಮರುದಿನ ಪರೀಕ್ಷೆಯ ವಿಷಯವೇ ಅವರಿಗೆ ಮರೆತು ಹೋಗಿತ್ತು. ಅವರು ಏನೂ ಅಧ್ಯಯನ ಮಾಡಿರಲಿಲ್ಲ. ಮರುದಿನ ಪರೀಕ್ಷೆ. ಈ ಪರೀಕ್ಷೆ ತಪ್ಪಿಸಲು ಏನಾದರೂ ಐಡಿಯಾ ಮಾಡಬೇಕು ಎಂದುಕೊಂಡರು. ನಾವು ನಿನ್ನೆ ರಾತ್ರಿ ಒಂದು ಮದುವೆಗೆ ಹೋಗಿದಾಗ ಒಂದು ಘಟನೆ ನಡೆಯಿತು.  ಬರುವಾಗ ಕಾರಿನ ಒಂದು ಟೈರ್ ಸ್ಪೋಟಗೊಂಡು ರಸ್ತೆಯಲ್ಲಿಯೇ ರಾತ್ರಿಯಿಡಿ ಕಳೆಯಬೇಕಾಯಿತು ಎಂಬ ಸುಳ್ಳನ್ನು ಪ್ರಾಂಶುಪಾಲರ ಬಳಿ ಹೇಳಿದರು. ಇವರ ಮಾತುಗಳನ್ನು… Read More »

ನೀತಿಕತೆ: ದಾರಿಯ ನಡುವೆ ಇರುವ ದೊಡ್ಡ ಕಲ್ಲು

ಒಬ್ಬ ರಾಜನಿದ್ದ. ಒಂದು ದಿನ ಆತ ಮಾರುವೇಷದಲ್ಲಿ ನಗರ ಸಂಚಾರಕ್ಕೆ ಹೊರಟ. ಒಂದು ರಸ್ತೆಯಲ್ಲಿ ದೊಡ್ಡ ಕಲ್ಲೊಂದನ್ನು ಇಟ್ಟು ಅಡಗಿ ಕುಳಿತ. ದಾರಿಗೆ ಅಡ್ಡವಾದ ಆ ಕಲ್ಲನ್ನು ಯಾರಾದರೂ ಬದಿಗೆ ಸರಿಸುತ್ತಾರೋ ಎಂದು ಕಾದುಕುಳಿತ.  ಆ ರಾಜನ ರಾಜ್ಯದ ಶ್ರೀಮಂತರು ಮತ್ತು ವರ್ತಕರು ರಸ್ತೆಯಲ್ಲಿ ಬಂದರು. ಆ ಕಲ್ಲನ್ನು ನೋಡಿದರೂ ನೋಡದಂತೆ ಮುಂದೆ ಸಾಗಿದರು. ಮತ್ತೆ ಹಲವು ಮಂದಿ ಬಂದರೂ ಯಾರೂ ಕಲ್ಲನ್ನು ಪಕ್ಕಕ್ಕೆ ಸರಿಸುವ ಯೋಚನೆ ಮಾಡಲಿಲ್ಲ. ಕೊನೆಗೆ ಒಬ್ಬಾತ ಬಂದ. ಆತನ ಕೈ ತುಂಬಾ ತರಕಾರಿ ಇತ್ತು. ನೋಡಲು… Read More »

ನೀತಿಕತೆ: ಚಿಟ್ಟೆಮರಿ ಮತ್ತು ಪರೋಪಕಾರಿ ಹುಡುಗ

ಅವನು ತುಂಬಾ ಹೃದಯವಂತ. ಯಾರೇ ಕಷ್ಟದಲ್ಲಿದ್ದರೂ ಸಹಾಯ ಮಾಡುವ ಪರೋಪಕಾರಿ. ಒಂದಿನ ಹೂದೋಟಕ್ಕೆ ಹೋದಾಗ ಅಲ್ಲೊಂದು ಚಿಟ್ಟೆಯ ಗೂಡು ಕಂಡ. ರೇಷ್ಮೆ ಹುಳುಗಳ ಗೂಡು ರೀತಿ ಹುಳು ಚಿಟ್ಟೆಯಾಗುವ ಮುನ್ನ ಇಂತಹದೊಂದು ಗೂಡಿನಿಂದ ಹೊರಬರಬೇಕು. ಒಂದಿನ ಈ ಯುವಕ ಆ ಚಿಟ್ಟೆಯ ಗೂಡು ಕಂಡ. ಅದು ಕೊಂಚ ತೆರೆದಿರುವುದನ್ನು ನೋಡಿದ. ತುಂಬಾ ಗಂಟೆ ಅಲ್ಲೇ ಕುಳಿತ.  ಆ ಚಿಟ್ಟೆ ಹುಳು ಪಾಪ ಆ ಗೂಡಿನಿಂದ ತನ್ನ ದೇಹವನ್ನು ಹೊರಗೆ ಹಾಕಲು ತುಂಬಾ ಕಷ್ಟಪಡುತ್ತಿತ್ತು.  ಆ ಯುವಕ ಹೀಗೆ ನೋಡುತ್ತಲೇ ಇದ್ದ. ಪಾಪ… Read More »

ನೀತಿಕತೆ: ಕುಂಟ ನಾಯಿಮರಿಗೆ ಬೆಲೆ ಎಷ್ಟು?

ಒಬ್ಬ ಅಂಗಡಿಯವ ತನ್ನ ಅಂಗಡಿಯ ಹೊರಗೆ `ನಾಯಿಮರಿಗಳು ಮಾರಾಟಕ್ಕಿವೆ” ಎಂದು ಬೋರ್ಡ್ ಹಾಕಿದ. ಇಂತಹ ಬೋರ್ಡ್‍ಗಳು ಮಕ್ಕಳನ್ನು ಸೆಳೆಯುತ್ತವೆ ಎಂದು ಅವನಿಗೆ ಗೊತ್ತಿತ್ತು. ಅದೇರೀತಿ ಆಯಿತು. ಪುಟ್ಟ ಬಾಲಕನೊಬ್ಬ ಅಂಗಡಿಗೆ ಬಂದ. `ನಾಯಿಮರಿಯನ್ನು ಎಷ್ಟು ರೂಪಾಯಿಗೆ ಮಾರುವಿರಿ?’ ಎಂದು ಆ ಬಾಲಕ ಪ್ರಶ್ನಿಸಿದ.  `2 ಸಾವಿರ ರೂ.ನಿಂದ 5 ಸಾವಿರ ರೂ.’ ಎಂದು ಅಂಗಡಿ ಮಾಲಿಕ ಉತ್ತರಿಸಿದ.  ಆ ಬಾಲಕ ತನ್ನ ಕಿಸೆಗೆ ಕೈ ಹಾಕಿದ. ಅವನಲ್ಲಿ ಇನ್ನೂರು ರೂಪಾಯಿ ಮಾತ್ರವಿತ್ತು. `ನನ್ನಲ್ಲಿ ಈಗ ಇಷ್ಟೇ ಇದೆ, ನಾನೊಮ್ಮೆ ನಾಯಿ ಮರಿಗಳನ್ನು… Read More »