ಜನತಾ ಸೇವಾ ಕೋಅಪರೇಟಿವ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆ: ನ.30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

By | 19/11/2021

ಜನತಾ ಸೇವಾ ಕೋಅಪರೇಟಿವ್ ಬ್ಯಾಂಕ್ ( ಜೆಎಸ್ ಸಿಬಿ) ಬೆಂಗಳೂರು, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆ : ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್ ( ಡಿಬಿಎ)- 2 ಹುದ್ದೆಗಳು ಹಾಗೂ ಜ್ಯೂನಿಯರ್ ಅಸಿಸ್ಟೆಂಟ್ – 10 ಹುದ್ದೆಗಳು ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ/ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು… Read More »

ಉಚಿತ ಕೋಳಿಸಾಕಾಣೆ, ಮೋಟರ್ ರೀವೈಂಡಿಂಗ್ ತರಬೇತಿ : ಹೆಚ್ಚಿನ ಮಾಹಿತಿ ಇಲ್ಲಿದೆ – ಸುದ್ದಿಜಾಲ ನ್ಯೂಸ್

By | 17/11/2021

ಶಿವಮೊಗ್ಗ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹೊಳಲೂರು ಇಲ್ಲಿ 30 ದಿನಗಳ ಮೋಟರ್ ರೀವೈಂಡಿಂಗ್, 10 ದಿನಗಳ ಕಾಲ ಕೋಳಿ ಸಾಕಾಣಿಕೆ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು, ಆಸಕ್ತ ನಿರುದ್ಯೋಗಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು. ಅಭ್ಯರ್ಥಿಯು ಗ್ರಾಮೀಣ ಬಿಪಿಎಲ್ ಕಾರ್ಡ್ ಹೊಂದಿರಬೇಕು. ಉಚಿತ ತರಬೇತಿಯನ್ನು ಪಡೆದ ನಂತರ ಸ್ವ ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಸಮಯದಲ್ಲಿ ಉಚಿತ ಊಟ- ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ… Read More »

ಕೊಪ್ಪಳ ಜಿಲ್ಲೆಯಲ್ಲಿ 28 ಅಂಗನವಾಡಿ ಕಾರ್ಯಕರ್ತೆ ಹಾಗೂ 133 ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

By | 13/11/2021

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಕೊಪ್ಪಳ‌ ಜಿಲ್ಲೆಯ 5 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 28 ಅಂಗನವಾಡಿ ಕಾರ್ಯಕರ್ತೆ ಮತ್ತು 133 ಅಂಗನವಾಡಿ ಸಹಾಯಕಿ ಗೌರವ ಧನ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 12-11-2021 ಆಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13-12-2021… Read More »

ನರೇಗಾ ಯೋಜನೆಯಡಿ ಉದ್ಯೋಗ : ತಿಂಗಳಿಗೆ 25,000 ರೂ. ಸಂಬಳ

By | 12/11/2021

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ನೇರನೇಮಕಾತಿ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ : ಜಿಲ್ಲಾ ಐ ಇ ಸಿ ಸಂಯೋಜಕ – 1ಹುದ್ದೆ ತಾಲ್ಲೂಕು ಐಇಸಿ ಸಂಯೋಜಕ – 1 ಹುದ್ದೆ ತಾಂತ್ರಿಕ ಸಹಾಯಕ ( ಕೃಷಿ ತೋಟಗಾರಿಕೆ )- 3 ಹುದ್ದೆಗಳು ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ – 7 ಹುದ್ದೆಗಳು ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 08-11-2021… Read More »

ಆದಾಯ ತೆರಿಗೆ ಇಲಾಖೆಯಲ್ಲಿ ವಿವಿಧ 21 ಹುದ್ದೆ : ಅರ್ಜಿ ಸಲ್ಲಿಸಲು ನ.15 ಕೊನೇ ದಿನಾಂಕ

By | 12/11/2021

ಭಾರತ ಸರಕಾರದ ಅಧೀನದ ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಹರು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು‌ ಹುದ್ದೆಗಳ ವಿವರ : ಇನ್ ಕಮ್ ಟ್ಯಾಕ್ಸ್ ಡಿಪಾರ್ಟ್ಮೆಂಟ್ ಟ್ಯಾಕ್ಸ್ ಅಸಿಸ್ಟೆಂಟ್ ( tax assistant) – 11, ಸ್ಟೆನೋಗ್ರಾಫರ್ ಗ್ರೇಡ್ – 2- 5, ಮಲ್ಟಿ ಟಾಸ್ಕಿಂಗ್ ಸ್ಟಾಫ್- 5 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ವಿದ್ಯಾರ್ಹತೆ : ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗೆ ಅಭ್ಯರ್ಥಿಗಳು ಪದವಿ… Read More »

ಬೆಂಗಳೂರಿನ ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ 60 ಹುದ್ದೆಗಳು : ಅರ್ಜಿ ಸಲ್ಲಿಸಲು ನ.17 ಕೊನೆಯ ದಿನಾಂಕ

By | 09/11/2021

ಬೆಂಗಳೂರಲ್ಲಿರುವ ಸೆಂಟ್ರಲ್ ಸಿಲ್ಕ್ ಬೋರ್ಡ್ ಕಚೇರಿಯಲ್ಲಿ ಟ್ರೈನರ್ ಮತ್ತು ಟ್ರೈನಿಂಗ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಪ್ರಕಟಣೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ‌ ಹಾಜರಾಗಬಹುದು. ಹುದ್ದೆ : ಟ್ರೈನರ್ – 30ಟ್ರೈನಿಂಗ್ ಅಸಿಸ್ಟೆಂಟ್ – 30 ಸೆಂಟ್ರಲ್ ಸಿಲ್ಕ್ ಬೋರ್ಡ್ ಕಚೇರಿಯಲ್ಲಿ ಮೇಲಿನ ಹುದ್ದೆಗಳನ್ನು ‘ Scheme For Capacity Building in Textile Sector Smarth’ ಎಂಬ ಯೋಜನೆಯಡಿ ನೇಮಕ ಮಾಡಿಕೊಳ್ಳಲಾಗುವುದು. ವಿದ್ಯಾರ್ಹತೆ : 10th , 12th, ITI, ಡಿಪ್ಲೋಮಾ, ಇಂಜಿನಿಯರಿಂಗ್ ಪದವಿ ಯಾವುದೇ ವಿದ್ಯಾರ್ಹತೆ… Read More »