3000 ಭೂಮಾಪಕ ಹುದ್ದೆಗಳ ನೇಮಕಾತಿ ಆದೇಶ ವಾಪಸ್ ಪಡೆದ ರಾಜ್ಯಸರಕಾರ- ಸುದ್ದಿಜಾಲ ನ್ಯೂಸ್

By | 05/12/2021

ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ‌‌ ಇಲಾಖೆಯಲ್ಲಿ ಹೊಸದಾಗಿ ಪರವಾನಗಿ ಭೂಮಾಪಕರನ್ನು ಆಯ್ಕೆ ಮಾಡಲು ಹೊರಡಿಸಿದ ಅಧಿಸೂಚನೆಯನ್ನು ರಾಜ್ಯಸರಕಾರ ಹಿಂಪಡೆದಿದೆ.

ರಾಜ್ಯದ ವಿವಿಧ ಜಿಲ್ಲೆಗಳಿಗೆ ಸೇರಿದಂತೆ ಒಟ್ಟು 3 ಸಾವಿರ ಲ್ಯಾಂಡ್ ಸರ್ವೇಯರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 03-12-2021 ರಿಂದ 31-12-2021 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚನೆ ನೀಡಲಾಗಿತ್ತು.

ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಹೊಸದಾಗಿ ಭೂಮಾಪಕರನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ದಿನಾಂಕ 01.12.2021 ರಂದು ಹೊರಡಿಸಿರುವ ಅಧಿಸೂಚನೆಯನ್ನು ವಾಪಸ್ ಪಡೆಯಲಾಗಿದೆ ಎಂದು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.

3000 ಅರ್ಹ ಅಭ್ಯರ್ಥಿಗಳನ್ನು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಹೊಸದಾಗಿ ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿತ್ತು.

Leave a Reply

Your email address will not be published. Required fields are marked *