3,552 ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದೇಶ

By | 27/10/2021

ಬೆಂಗಳೂರು : 2021-22 ನೇ ಸಾಲಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ 3,552 ಅತಿಥಿ ಉಪನ್ಯಾಸಕರ ನೇಮಕಕ್ಕೆ ರಾಜ್ಯ ಸರಕಾರ ಆಡಳಿತಾತ್ಮಕ ಅನುಮತಿ ನೀಡಿದೆ.

ಮಾಸಿಕ ಗೌರವಧನ 9 ಸಾವಿರ ರೂ. ನಿಗದಿ ಪಡಿಸಿದೆ. ಈ ಬಾರಿ ಎಸ್ಸೆಸ್ಸೆಲ್ಸಿಯಲ್ಲಿ ಎಲ್ಲ ವಿದ್ಯಾರ್ಥಿಗಳು ಪಾಸ್ ಆಗಿದ್ದು, ಪ್ರಥಮ ಪಿಯುಗೆ ಹೆಚ್ಚಿನ ವಿದ್ಯಾರ್ಥಿಗಳು ಪ್ರವೇಶ ಪಡೆದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಬೋಧನಾ ದೃಷ್ಟಿಯಿಂದ ಅತಿಥಿ ಉಪನ್ಯಾಸಕರ ನೇಮಕಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *