ಕರ್ನಾಟಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ನೇಮಕ : ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭ – ಸುದ್ದಿಜಾಲ ನ್ಯೂಸ್

By | 29/12/2021

ಕರ್ನಾಟಕ ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಸಿಎಆರ್/ ಡಿಎಆರ್) ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್ ಹೊರಡಿಸಲಾಗಿದೆ.

ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಆರ್ ಎಸ್ ಐ, ಸಿಎಆರ್/ ಡಿಎಆರ್ ) (ಪುರುಷ) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 28-12-2021

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-01-2022

ಆನ್ಲೈನ್ ಮೂಲಕ ಅರ್ಜಿ ಶುಲ್ಕ ಸಲ್ಲಿಸಲು ಕೊನೆಯ ದಿನಾಂಕ : 29-01-2022

ಹುದ್ದೆಗಳ ಸಂಖ್ಯೆ : 71

ಹುದ್ದೆಗಳ ವಿವರ : ಹೆಚ್ ಕೆ ರೀಜನ್ ರಿಸರ್ವ್ಡ್ ಪೋಸ್ಟ್ – 10

ಎನ್ ಹೆಚ್ ಕೆ ರಿಸರ್ವ್ಡ್ ಪೋಸ್ಟ್ – 61

ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 21 ಹಾಗೂ ಗರಿಷ್ಠ 26 ವಯೋಮಿತಿ ಹೊಂದಿರಬೇಕು.

ಅರ್ಜಿ ಶುಲ್ಕ : ಪ.ಜಾ/ಪ.ಪಂ / ಸಿಎಟಿ-1 ಅಭ್ಯರ್ಥಿಗಳಿಗೆ ರೂ. 250/-

ಜಿಎಂ/ ಒಬಿಸಿ ಅಭ್ಯರ್ಥಿಗಳಿಗೆ ರೂ.500/-
ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿ ಶುಲ್ಕವನ್ನು ಪಾವತಿಸಬೇಕು ‌

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *