ಬೀದರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 5 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 28 ಅಂಗನವಾಡಿ ಕಾರ್ಯಕರ್ತೆ ಮತ್ತು 66 ಅಂಗನವಾಡಿ ಸಹಾಯಕಿಯರ ಸೇರಿದಂತೆ ಒಟ್ಟು 94 ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಜನವರಿ 1, 2022 ರಿಂದ ಜನವರಿ 31, 2022 ರ ಸಂಜೆ 5.30 ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕನಿಷ್ಠ 4 ನೇ ತರಗತಿ ಮತ್ತು ಗರಿಷ್ಠ 9 ನೇ ತರಗತಿ ತೇರ್ಗಡೆಯಾಗಿರಬೇಕು.
ವಯೋಮಿತಿ : ಕನಿಷ್ಠ 18 ರಿಂದ ಗರಿಷ್ಠ 35 ವರ್ಷ ವಯೋಮಿತಿಯೊಳಗಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ನೋಟಿಫಿಕೇಶನ್ ಕ್ಲಿಕ್ ಮಾಡಿ