5 ರಿಂದ 10 ನೇ ತರಗತಿಗಳ ಆಫ್ ಲೈನ್ ಆನ್ ಲೈನ್ ತರಗತಿಗಳ ಮಾರ್ಗಸೂಚಿ ಬಿಡುಗಡೆ

2021-22 ನೇ ಸಾಲಿನ ಶೈಕ್ಷಣಿಕ ವರ್ಷದ ತಯಾರಿಯು ಜುಲೈ ಒಂದರಿಂದ ಆರಂಭವಾಗಲಿದ್ದು 5 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಭೌತಿಕ ತರಗತಿ ಬದಲು ಆನ್ಲೈನ್ ಮತ್ತು ಆಫ್ಲೈನ್ ನಲ್ಲಿ ಪಠ್ಯ ಬೋಧನೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ದೂರದರ್ಶನ ಚಂದನ ವಾಹಿನಿಯಲ್ಲಿ ಸಂವೇದಾ ಕಾರ್ಯಕ್ರಮದ ಮೂಲಕ 1662 ವಿಡಿಯೋ ಪಾಠ ಬೋಧನಾ ನಡೆಯಲಿದೆ. ಎಫ್ ಎಂ ರೇಡಿಯೋದಲ್ಲಿ ಆಡಿಯೋ ಪಾಠಗಳ ಪ್ರಸಾರನಡೆಯಲಿದೆ. ಈಗಾಗಲೇ ಕೇಂದ್ರ ಸರಕಾರದ ದೀಕ್ಷಾ ಆ್ಯಪ್ ನಲ್ಲಿ 1 ರಿಂದ 10 ನೇ ತರಗತಿ ಮಕ್ಕಳ ಪಠ್ಯಕ್ಕೆ ಸಂಬಂದಿಸಿದಂತೆ 22 ಸಾವಿರಕ್ಕೂ ಹೆಚ್ಚು ಕಂಟೆಂಟ್ ಗಳನ್ನು ಅಪ್ಲೋಡ್ ಮಾಡಿದೆ. ಮೌಲ್ಯವರ್ಧಿತ ಪಠ್ಯಪುಸ್ತಕಗಳೂ ದೊರೆಯಲಿದೆ. ಇವುಗಳನ್ನೆಲ್ಲ ಡೌನ್‌ಲೋಡ್ ಮಾಡಿ‌ ಅಪ್ಲೋಡ್ ಮಾಡಿ ವಿದ್ಯಾರ್ಥಿಗಳು ಅಭ್ಯಾಸ ಮಾಡಬಹುದು.

ದೂರದರ್ಶನ ರೇಡಿಯೋ ಪಾಠ ಬೋಧನಾ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಶಿಕ್ಷಣ ಇಲಾಖೆ ಹೇಳಿದೆ.

ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಸಂಪರ್ಕಿಸಿ ಮೊಬೈಲ್ ಫೋನ್, ಇಂಟರ್ನೆಟ್, ರೇಡಿಯೋ ದೂರದರ್ಶನ ಸೇರಿದಂತೆ ಇತರ ತಾಂತ್ರಿಕ ಸೌಲಭ್ಯ ಮಾಹಿತಿ ಪಡೆದು ಅವುಗಳ ಮೂಲಕ ಶಿಕ್ಷಣ ಪಡೆಯಲು ಸಹಾಯಕ ಮಾಡಬೇಕು. ಯಾವುದೇ ತಾಂತ್ರಿಕ ಸೌಲಭ್ಯವಿಲ್ಲದ ವಿದ್ಯಾರ್ಥಿಗಳ ಮನೆಯ ಸಮೀಪದ ‌ಸಹೃದಯಿ ವ್ಯಕ್ತಿಗಳನ್ನು ಗುರುತಿಸಿ ಅವರ ಬಳಿ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಳ್ಳಲು ಸಹಾಯವಾಗುವಂತೆ ಶಿಕ್ಷಕರು ಮನವೊಲಿಸುವಂತೆ ಶಿಕ್ಷಕರಿಗೆ ಇಲಾಖೆಯು ಸೂಚಿಸಿದೆ.

error: Content is protected !!