ಮಡಿಕೇರಿ: ಕೇಂದ್ರ ಪುರಸ್ಕೃತ ಯೋಜನೆಯಾದ ಆತ್ಮ ಯೋಜನೆಯಡಿ ಜಂಟಿ ಕೃಷಿ ನಿರ್ದೇಶಕರ ಕಚೇರಿ ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿ ಖಾಲಿ ಇರುವ ಒಂದು ಉಪ ಯೋಜನಾ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಂ.ಎಸ್ಸಿ( ಕೃಷಿ, ಅರಣ್ಯ ತೋಟಗಾರಿಕೆ, ಮೀನುಗಾರಿಕೆ) ವಿದ್ಯಾರ್ಹತೆ ಹೊಂದಿದ್ದು, ಕನಿಷ್ಟ 5 ವರ್ಷಗಳಿಂದ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಗಳಲ್ಲಿ ಅನುಭವ ಹೊಂದಿರತಕ್ಕದ್ದು. ಹಾಗೂ ಎಮ್.ಎಸ್ ಆಫೀಸ್‍ನಲ್ಲಿ ಪರಿಣಿತಿ ಹೊಂದಿರಬೇಕು.( ಆತ್ಮ ಯೋಜನೆಯಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು). ಗರಿಷ್ಠ 45 ವರ್ಷ ವಯೋಮಿತಿ ಹೊಂದಿರಬೇಕು. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸೆಪ್ಟೆಂಬರ್, 14 ರಂದು ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಸಲ್ಲಿಸಬೇಕು. ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಅಭ್ಯರ್ಥಿಗಳಿಗೆ ಸೆಪ್ಟೆಂಬರ್, 17 ರಂದು ಸಂದರ್ಶನ ನಡೆಯಲಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.









Got a Questions?
Find us on Socials or Contact Us and we’ll get back to you as soon as possible.