ಬೆಂಗಳೂರು : ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಖಾಲಿ ಇರುವ ಐದು ಸೈಕ್ಯಾಟ್ರಿಕ್ ಸೋಷಿಯಲ್ ವರ್ಕರ್ ಹುದ್ದೆಗಳಿಗೆ 11 ತಿಂಗಳ ಅವಧಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿಯಲ್ಲಿ ಅಧಿಕ ಅಂಕ ಗಳಿಸಿದವರು, ಮಾನಸಿಕ ಮತ್ತು ಮನೋವೈದ್ಯಕೀಯ ವಿಷಯದ ಮೇಲೆ ಸ್ನಾತಕೋತ್ತರ ಕಲಿತು ಭಾರತೀಯ ಪುನರ್ವಸತಿ ಮಂಡಳಿ ಮಾನ್ಯತೆ ಪಡೆದವರು ಅರ್ಹರು.
ಮಾಸಿಕ ರೂ.25 ಸಾವಿರ ಇರಲಿದೆ. 45 ವರ್ಷ ವಯೋಮಿತಿ ಮೀರದವರು ನ. 15 ರೊಳಗೆ ಮುಖ್ಯ ಅಧೀಕ್ಷಕರು, ಕೇಂದ್ರ ಕಾರಾಗೃಹ, ಪರಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ , ಬೆಂಗಳೂರು – 560100 ಇಲ್ಲಿಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.08025733809 ಗೆ ಸಂಪರ್ಕಿಸಬಹುದು.









Got a Questions?
Find us on Socials or Contact Us and we’ll get back to you as soon as possible.