ಬೆಂಗಳೂರು ರೂರಲ್ ಜಿಲ್ಲಾ ಪಂಚಾಯತ್ ನಲ್ಲಿ ಹುದ್ದೆ: ಈ ಕೂಡಲೇ ಅರ್ಜಿ ಸಲ್ಲಿಸಿ

By | 09/03/2021

ಬೆಂಗಳೂರು ರೂರಲ್ ಜಿಲ್ಲಾ‌ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 26, ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 10-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-03-2021(5pm)
ಅರ್ಜಿ ಶುಲ್ಕ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಬೆಂಗಳೂರು ರೂರಲ್ ಜಿಲ್ಲಾ‌ಪಂಚಾಯತ್ ನಲ್ಲಿ ಟೆಕ್ನಿಕಲ್ ಸ್ಟಾಫ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆ ಸಂಖ್ಯೆ :09

ವಯೋಮಿತಿ : ಟೆಕ್ನಿಕಲ್ ಸ್ಟಾಫ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 40 ವಯೋಮಿತಿ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಹುದ್ದೆಗಳ ವಿವರ : ಟೆಕ್ನಿಕಲ್ ಕೋರ್ಡಿನೇಟರ್ – 03
ತಾಲೂಕು ಐ.ಇ.ಸಿ ಕೋರ್ಡಿನೇಟರ್- 04
ಟೆಕ್ನಿಕಲ್ ಅಸಿಸ್ಟೆಂಟ್ (ಅಗ್ರಿಕಲ್ಚರ್)- 01
ಟೆಕ್ನಿಕಲ್ ಅಸಿಸ್ಟೆಂಟ್ (ಹೋರಿಕಲ್ಚರ್ ) -01

ವಿದ್ಯಾರ್ಹತೆ : ಟೆಕ್ನಿಕಲ್ ಕೋರ್ಡಿನೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ, ಎಂ.ಟೆಕ್ ತೇರ್ಗಡೆ ಹೊಂದಿರಬೇಕು.

ತಾಲೂಕು ಐ.ಇ.ಸಿ ಕೋರ್ಡಿನೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗ್ರಾಜ್ಯುಯೇಟ್ ಪೋಸ್ಟ್, ಗ್ರಾಜ್ಯುಯೇಟ್ ಎಂ.ಎಸ್.ಡಬ್ಲ್ಯೂ‌ ಹೊಂದಿರಬೇಕು.

ಟೆಕ್ನಿಕಲ್ ಅಸಿಸ್ಟೆಂಟ್ (ಅಗ್ರಿಕಲ್ಚರ್) ಹಾಗೂ ಟೆಕ್ನಿಕಲ್ ಅಸಿಸ್ಟೆಂಟ್ ( ಹೋರಿಕಲ್ಚರ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಎಸ್ಸಿ, ಎಂ.ಎಸ್ಸಿ ಪದವಿ ಹೊಂದಿರಬೇಕು.

ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ, ಅರ್ಜಿ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಈ ಕೆಳಗಿನ ವಿಳಾಸಕ್ಕೆ ದಿನಾಂಕ 26-03-2021(5pm) ರೊಳಗೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.

Chief Executive Officers, Bangalore Rural Zilla Panchayat, District Administrative House, Beerasandra (Chapparadakallu), Kundan Hobli, Devanahalli Taluk – 562110, Bengaluru – 562110

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ: https://bangalorerural.nic.in/en/

Author: Mallika Putran

ಕರ್ನಾಟಕ ಬೆಸ್ಟ್‌.ಕಾಂ Blogger

Leave a Reply

Your email address will not be published. Required fields are marked *