2021-22 ನೇ ಶೈಕ್ಷಣಿಕ ವರ್ಷಕ್ಕೆ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕಲಾ ಮತ್ತು ವಿಜ್ಞಾನ ವಿಭಾಗಗಳ ಅಡಿಯಲ್ಲಿ ಈ ಕೆಳಗಿನ ಸ್ನಾತಕೋತ್ತರ ಅಧ್ಯಯನ ವಿಭಾಗದಲ್ಲಿ ಬೋಧಿಸಲು ಪೂರ್ಣ/ಅರೆಕಾಲಿಕ ಅತಿಥಿ ಉಪನ್ಯಾಸಕರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯುಜಿಸಿ ನಿಯಮಗಳ ಪ್ರಕಾರ ಆಯಾ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ವಿಶ್ವವಿದ್ಯಾನಿಲಯದ ಜಾಲತಾಣ http://www.bcu.ac.in ದಲ್ಲಿ ಡೌನ್‌ಲೋಡ್ ಮಾಡಿಕೊಳ್ಳುವ ಮೂಲಕ ಸಂಬಂಧಿತ ದಾಖಲೆಯ ಪ್ರತಿಗಳೊಂದಿಗೆ ಕುಲಸಚಿವರು, ಬೆಂಗಳೂರು ನಗರ ವಿಶ್ವವಿದ್ಯಾನಿಲಯ, ಸೆಂಟ್ರಲ್ ಕಾಲೇಜು ಆವರಣ, ಬೆಂಗಳೂರು – 560001 ಇವರಿಗೆ ಕಚೇರಿ ಸಮಯದಲ್ಲಿ ದಿನಾಂಕ : 30-11-2021 ರೊಳಗೆ ಸಲ್ಲಿಸಲು ಸೂಚಿಸಲಾಗಿದೆ.
ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನದ ದಿನಾಂಕವನ್ನು ತಿಳಿಸಲಾಗುವುದು. ಹೆಚ್ಚಿನ ವಿವರಗಳಿಗಾಗಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜಾಲತಾಣಕ್ಕೆ ಭೇಟಿ ನೀಡಿ.

















Got a Questions?
Find us on Socials or Contact Us and we’ll get back to you as soon as possible.