ಬ್ಯಾಂಕ್ ಆಫ್ ಬರೋಡದಲ್ಲಿ 376 ವಿವಿಧ ಹುದ್ದೆ : ಅರ್ಜಿ ಸಲ್ಲಿಸಲು ಡಿ.9 ಕಡೇ ದಿನಾಂಕ

By | 23/11/2021

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ಬ್ಯಾಂಕ್ ಆಫ್ ಬರೋಡಾದಲ್ಲಿ 376 ಹ್ಯೂಮನ್ ರಿಸೋರ್ಸ್/ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟ ಹೊರಡಿಸಿದೆ.

ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳ ವಿವರ : ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜರ್ – 326 ಹುದ್ದೆಗಳು

ಇ- ವೆಲ್ತ್ ರಿಲೇಶನ್ ಶಿಪ್ ಮ್ಯಾನೇಜರ್ – 50 ಹುದ್ದೆಗಳು.

ಒಟ್ಟು ಹುದ್ದೆಗಳು : 376 ಹುದ್ದೆಗಳು

ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ‌ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ನವೆಂಬರ್ 19,2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 09, 2021

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಹ್ಯೂಮನ್ ರಿಸೋರ್ಸ್/ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಹೊಂದಿರಬೇಕು. ಜೊತೆಗೆ ಹುದ್ದೆಯಲ್ಲಿ ಕನಿಷ್ಠ ಅನುಭವವನ್ನು ಹೊಂದಿರಬೇಕು.

ವಯೋಮಿತಿ : ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜರ್ ಹುದ್ದೆಗಳಿಗೆ ಕನಿಷ್ಟ 24 ವರ್ಷ ಹಾಗೂ ಗರಿಷ್ಠ 35 ವರ್ಷ ಮತ್ತು ಇ ವೆಲ್ತ್ ರಿಲೇಶನ್ ಶಿಪ್ ಮ್ಯಾನೇಜರ್ ಹುದ್ದೆಗಳಿಗೆ ಕನಿಷ್ಟ 23 ರಿಂದ ಗರಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ- ಎನ್ ಸಿಎಲ್ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು, ತದನಂತರ ನೇರ ಸಂದರ್ಶನ ಅಥವಾ ಇನ್ಯಾವುದೇ ಇತರೆ ರೀತಿಯಲ್ಲಿ ಆಯ್ಕೆಯನ್ನು ಮಾಡಲಾಗುತ್ತದೆ.

ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ರಿಸೋರ್ಸ್/ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು ನಿಗದಿತ ಮೊತ್ತ 600/- ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು 100/- ರೂ. ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *