BCP : 16 ತಾಂತ್ರಿಕ ಹುದ್ದೆಗಳ ನೇಮಕ, ತಿಂಗಳ ಸಂಬಳ ₹ 75,000/-,ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ : ಸುದ್ದಿಜಾಲ ನ್ಯೂಸ್

By | 20/12/2021

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ಹೊಸದಾಗಿ ಸೃಜಿಸಲಾದ 8 ಸಿಇಎನ್ ಪೊಲೀಸ್ ಠಾಣೆಗಳನ್ನು ಬಲಪಡಿಸಲು ಪರಿಣಿತ 16 ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಡಿಸೆಂಬರ್ 20,2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 21, 2022

ಹುದ್ದೆಯ ಹೆಸರು : ಸೈಬರ್ ಅನಾಲಿಸ್ಟ್ – 08 ಹುದ್ದೆ
ಡಿಜಿಟಲ್ ಫಾರೆನ್ಸಿಕ್ ಅನಾಲಿಸ್ಟ್ – 08 ಹುದ್ದೆ

ವಿದ್ಯಾರ್ಹತೆ : ಸೈಬರ್ ಅನಾಲಿಸ್ಟ್ ಮತ್ತು ಡಿಜಿಟಲ್ ಫಾರೆನ್ಸಿಜ್ ಅನಾಲಿಸ್ಟ್ ಹುದ್ದೆಗಳಿಗೆ ಮಾಹಿತಿ ತಂತ್ರಜ್ಞಾನ / ಕಂಪ್ಯೂಟರ್ ಸೈನ್ಸ್/ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಟೆಲಿಕಮ್ಯುನಿಕೇಶನ್ ನಲ್ಲಿ ಬಿ.ಇ/ ಬಿ.ಟೆಕ್ / ಬಿಸಿಎ/ ಎಂ.ಎಸ್ಸಿ/ ಎಂ.ಸಿ.ಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಕನಿಷ್ಠ 25 ರಿಂದ ಗರಿಷ್ಠ 35 ವರ್ಷ ವಯೋಮಿತಿಯೊಳಗಿರಬೇಕು‌. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ : ಸೈಬರ್ ಸೆಕ್ಯುರಿಟಿ ಅನಾಲಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.75,000/- ಮತ್ತು ಡಿಜಿಟಲ್ ಫಾರೆನ್ಸಿಕ್ ಅನಾಲಿಸ್ಟ್ ಹುದ್ದೆಗಳಿಗರ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರೂ. ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ : ಅರ್ಜಿ ಸಲ್ಲಿಸುದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು‌.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ನಿಗದಿತ ಅರ್ಜಿ ದಾಖಲೆಗಳನ್ನು ಲಗತ್ತಿಸುವ ಮೂಲಕ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅಥವಾ No.1, Infantry Road, Office of the Commissioner of Police, Bengaluru- 560001 ವಿಳಾಸಕ್ಕೆ ಅರ್ಜಿಯನ್ನು ಜನವರಿ 21, 2022 ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ನೋಟಿಫಿಕೇಶನ್ ಈ ಕೆಳಗೆ ನೀಡಲಾಗಿದೆ

Leave a Reply

Your email address will not be published. Required fields are marked *