BEL : ಟ್ರೈನೀ ಇಂಜಿನಿಯರ್ | ಹುದ್ದೆಗಳಿಗೆ ಅರ್ಜಿ ಆಹ್ವಾನ – ಸುದ್ದಿಜಾಲ ನ್ಯೂಸ್

By | 31/12/2021

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ( ಬಿಇಎಲ್ ) ನಲ್ಲಿ 8 ಟ್ರೈನಿ ಇಂಜಿನಿಯರ್ | ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಜನವರಿ 15, 2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : ಟ್ರೈನಿ ಇಂಜಿನಿಯರ್ |

ಹುದ್ದೆ ಸಂಖ್ಯೆ : 08

ವಿದ್ಯಾರ್ಹತೆ ಮತ್ತು ಅನುಭವ : ಈ ಹುದ್ದೆಗಳಿಗೆ ಬಿ.ಇ/ ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ / ವಿಶ್ವವಿದ್ಯಾಲಯ / ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಹಾಕಬಹುದು.

ವಯೋಮಿತಿ : ಡಿ.1, 2021 ರ ಅನ್ವಯ ಗರಿಷ್ಠ 28 ವರ್ಷ ವಯೋಮಿತಿಯೊಳಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 40,000/- ರೂ. ಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 200/- ರೂ. ಅರ್ಜಿ ಶುಲ್ಕವನ್ನು ಎಸ್ ಬಿಐ ಕಲೆಕ್ಟ್ ಅಥವಾ ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 15, 2022 ರೊಳಗೆ ಅರ್ಜಿಯನ್ನು ಕೊರಿಯರ್ ಅಥವಾ ಪೋಸ್ಟ್ ಮೂಲಕ ತಲುಪಿಸಬಹುದು.

ಕಚೇರಿ ವಿಳಾಸ : DGM( HR/MR,MS&ADSN), Bharat Electronics Limited, Jalahalli Post, Bangalore – 560013, Karnataka

ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *