Category Archives: after sslc what next

ವೈದ್ಯರಾಗುವುದು ಹೇಗೆ?: ಡಾಕ್ಟರ್ ಆಗಲು ಏನೆಲ್ಲ ಓದಬೇಕು?

By | 20/10/2019

ಹೆಚ್ಚಿನ ವಿದ್ಯಾರ್ಥಿಗಳಿಗೆ ವೈದ್ಯ ವೃತ್ತಿ ಅಚ್ಚುಮೆಚ್ಚು. ರೋಗಿಗಳ ಪಾಲಿಗೆ ದೇವರಾಗುವ ಅದ್ಭುತ ಅವಕಾಶವಿದು. ಆದರೆ, ಈಗಿನ ದುಬಾರಿ ಶಿಕ್ಷಣವು ಸಾಕಷ್ಟು ವಿದ್ಯಾರ್ಥಿಗಳನ್ನು ವೈದ್ಯ ವೃತ್ತಿಯಿಂದ ದೂರವಿಟ್ಟಿದೆ. ಆದರೆ, ಅತ್ಯುತ್ತಮ ಅಂಕದ ನೆರವಿನಿಂದ ಸ್ಕಾಲರ್‍ಷಿಪ್ ಮತ್ತು ಬ್ಯಾಂಕ್ ಸಾಲ ಪಡೆದು ವೈದ್ಯರಾದ ಸಾಕಷ್ಟು ಜನರು ನಮ್ಮ ನಿಮ್ಮ ನಡುವೆ ಇದ್ದಾರೆ. ಪಿಯುಸಿಯಲ್ಲಿ ವಿಜ್ಞಾನ ಓದಿರಬೇಕು. ವೈದ್ಯರಾಗಬೇಕಾದರೆ ಮೊದಲ ಹಂತವಾಗಿ ಎಂಬಿಬಿಎಸ್ ಪದವಿ ಪಡೆಯಬೇಕು. ಇಂಟರ್ನ್‍ಷಿಪ್ ಸೇರಿದಂತೆ ಸುಮಾರು 5-6 ವರ್ಷ ಓದಬೇಕು. ಎಂಬಿಬಿಎಸ್, ಬಿಡಿಎಸ್ ಮತ್ತು ವೆಟರ್ನಿಟಿ ವಿಜ್ಞಾನ ಇತ್ಯಾದಿ ಓದಲು ನೀವು… Read More »

ಹೆಲಿಕಾಪ್ಟರ್ ಪೈಲೆಟ್ ಆಗುವುದು ಹೇಗೆ?

By | 20/10/2019

ದೊಡ್ಡ ಕನಸು ಕಂಡು ಅದನ್ನು ಈಡೇರಿಸಿಕೊಂಡು ಭವಿಷ್ಯ ಬದಲಾಯಿಸಲು ಬಯಸುವವರು ರೆಕ್ಕೆ ತಿರುಗಿಸುತ್ತ ಹಾರುವ ಹೆಲಿಕಾಪ್ಟರ್ ಪೈಲೆಟ್ ಸೀಟಲ್ಲಿ ಕುಳಿತುಕೊಳ್ಳುವ ಕುರಿತು ಆಲೋಚಿಸಬಹುದು. ಹೆಲಿಕಾಪ್ಟರ್ ಪೈಲೆಟ್ ಆಗಲು ಬಯಸುವವರಿಗೆ ಕಮರ್ಷಿಯಲ್ ಹೆಲಿಕಾಪ್ಟರ್ ಪೈಲಟ್ ಲೈಸನ್ಸ್ (ಸಿಎಚ್‍ಪಿಎಲ್) ಮತ್ತು ಪ್ರೈವೇಟ್ ಹೆಲಿಕಾಪ್ಟರ್ ಪೈಲಟ್ ಲೈಸನ್ಸ್ (ಪಿಎಚ್‍ಪಿಎಲ್) ಕೋರ್ಸ್‍ಗಳು ಲಭ್ಯ ಇರುತ್ತವೆ. ಈ ಕೋರ್ಸ್‍ಗಳ ಅವಧಿ ಬಹುತೇಕ 1 ಅಥವಾ 2 ವರ್ಷದ ಒಳಗೆ ಇರುತ್ತದೆ. ಈ ಕೋರ್ಸ್ ಅನ್ನು ಪುರುಷರು ಅಥವಾ ಮಹಿಳೆಯರು ಪಡೆದುಕೊಳ್ಳಬಹುದಾಗಿದೆ. ಆಯಾ ತರಬೇತಿ ಸಂಸ್ಥೆಗಳಿಗೆ ಅನುಗುಣವಾಗಿ ಕನಿಷ್ಠ 17… Read More »

ವಿಮಾನ ಪೈಲೆಟ್ ಆಗುವುದು ಹೇಗೆ?

By | 18/10/2019

ಪುಟ್ಟ ಲೋಹದ ಹಕ್ಕಿ ಆಕಾಶದಲ್ಲಿ ಹಾರಾಟ ನಡೆಸಿದಾಗ ಕಣ್ಣೆತ್ತಿ ನೋಡುವ ಅಭ್ಯಾಸ ನಿಮಗೂ ಇರಬಹುದು. ಒಮ್ಮೆಯೂ ವಿಮಾನಯಾನ ಮಾಡದವರಿಗೆ  ಆಕಾಶಯಾನ ಮಾಡಬೇಕೆಂಬ ಕನಸು ಮೂಡುತ್ತದೆ. ಇನ್ನಷ್ಟು ಮಹಾತ್ವಕಾಂಕ್ಷೆಯುಳ್ಳವರಿಗೆ ವಿಮಾನದ ಪೈಲೆಟ್ ಆಗಬೇಕೆಂಬ ಆಸೆಯೂ ಮೂಡಬಹುದು. ಬಸ್ ಚಾಲಕನ ಪಕ್ಕ ಕುಳಿತ ಮಕ್ಕಳು ಚಾಲಕನಾಗಬೇಕೆಂಬ ಕನಸು ಕಂಡರೆ ಅದು ಈಡೇರಬಹುದು. ಆದರೆ, ವಿಮಾನ ಪೈಲೆಟ್ ಆಗುವುದು ಸುಲಭವಲ್ಲ. ಹಾಗಂತ, ಅದು ಈಡೇರದ ಕನಸೇನೂ ಅಲ್ಲ! ಈಗಲೂ ವಿಮಾನ ಪೈಲೆಟ್ ಅತ್ಯಾಕರ್ಷಕ ಉದ್ಯೋಗ. ಈ ಹುದ್ದೆ ನಿಮಗೆ ಸಮಾಜದಲ್ಲಿ ಅತ್ಯುನ್ನತ ಪ್ರತಿಷ್ಠೆ ಒದಗಿಸುತ್ತದೆ. ದೇಶದಲ್ಲಿ… Read More »

ವೈಮಾನಿಕ ಎಂಜಿನಿಯರಿಂಗ್: ಶಿಕ್ಷಣ ಮತ್ತು ಕರಿಯರ್ ಹೇಗೆ?

By | 18/10/2019

ಬಹುತೇಕರಿಗೆ ವಿಮಾನವೆಂದರೆ ಏನೋ ಆಕರ್ಷಣೆ. ಕೆಲವರಿಗೆ ವಿಮಾನದ ಪೈಲೆಟ್ ಆಗುವ ಕನಸು. ಇನ್ನು ಕೆಲವರಿಗೆ ವಿಮಾನದೊಳಗೆ ಆತಿಥ್ಯ ನೀಡುವ ಗಗನಸಖಿ ಇತ್ಯಾದಿ ಕ್ಯಾಬಿನ್ ಕ್ರ್ಯೂ ಕೆಲಸ ಅಚ್ಚುಮೆಚ್ಚು. ಇನ್ನು ಕೆಲವರಿಗೆ ವಿಮಾನ ಕಟ್ಟುವ, ಬಿಚ್ಚುವ ಅಥವಾ ಹೊಸತನ್ನು ಅನ್ವೇಷಿಸುವ ಟೆಕ್ನಿಕಲ್ ವಿಭಾಗ ಇಷ್ಟ. ಇಂತವರು ಹೆಚ್ಚಾಗಿ ಏರೋಸ್ಪೇಸ್ ಎಂಜಿನಿಯರಿಂಗ್ (aerospace engineering) ವಿಭಾಗವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಇದು ಎಂಜಿನಿಯರಿಂಗ್‍ನಲ್ಲೇ ಹೆಚ್ಚು ಸವಾಲಿನಿಂದ ಕೂಡಿದ ಎಂಜಿನಿಯರಿಂಗ್ ವಿಭಾಗ ಎಂದೇ ಹೆಸರುವಾಸಿಯಾಗಿದೆ. [rml_read_more] ವಿಮಾನಯಾನ, ಬಾಹ್ಯಾಕಾಶ ಮತ್ತು ರಕ್ಷಣಾ ವ್ಯವಸ್ಥೆಗಳಿಗೆ ಹೊಸ ತಂತ್ರಜ್ಞಾನ ಅಭಿವೃದ್ಧಿಪಡಿಸುವುದು… Read More »

ವಿಜ್ಞಾನಿ ಆಗುವುದು ಹೇಗೆ: ಕಲಿಕೆ ಮತ್ತು ತಯಾರಿ ಹೇಗಿರಬೇಕು?

By | 18/10/2019

ಸಿ.ವಿ. ರಾಮನ್, ಎಪಿಜೆ ಅಬ್ದುಲ್ ಕಲಾಂ, ಶ್ರೀನಿವಾಸ ರಾಮನುಜನ್, ಹೋಮಿ ಜೆ. ಭಾಭಾ, ಸತೇಂದ್ರನಾಥ್ ಬೋಸ್, ವಿಕ್ರಂ ಸಾರಭಾಯಿ ಹೀಗೆ ಭಾರತ ಅನೇಕ ಪ್ರಶಿದ್ಧ ವಿಜ್ಞಾನಿಗಳನ್ನು ಜಗತ್ತಿಗೆ ನೀಡಿದೆ. ನಿಮಗೂ ಭವಿಷ್ಯದಲ್ಲಿ ವಿಜ್ಞಾನಿಯಾಗಿ ಸಾಧಿಸುವ ಬಯಕೆ ಇರಬಹುದು. ಹೊಸತನ್ನು ಅನ್ವೇಷಣೆ ಮಾಡುವ ವಿಜ್ಞಾನಿಗೆ ಎಲ್ಲಿಲ್ಲದ ಗೌರವ.  ಈ ಹಿಂದಿನ ಅನ್ವೇಷಣೆಗಳನ್ನು ಆಧಾರವಾಗಿಟ್ಟುಕೊಂಡು ಅಥವಾ ಸಂಪೂರ್ಣ ಹೊಸದಾಗಿ ವಿಜ್ಞಾನಿಗಳು ಸಂಶೋಧನೆ ನಡೆಸುತ್ತಾರೆ. ನಿಮ್ಮ ಭವಿಷ್ಯದ ಕರಿಯರ್ ಅನ್ನು ವಿಜ್ಞಾನಿಯಾಗಿ ಬದಲಾಯಿಸಲು ಬಯಸಿದರೆ ವಿದ್ಯಾರ್ಥಿ ಜೀವನದಿಂದಲೇ ತಯಾರಿ ಆರಂಭಿಸಿ. ಬಾಲ್ಯದಿಂದಲೇ ವಿಜ್ಞಾನಿಯಾಗುವ ಕನಸಲ್ಲಿ ಇದ್ದರೆ… Read More »

ಇಸ್ರೊದಲ್ಲಿ ಉದ್ಯೋಗ ಪಡೆಯುವುದು ಹೇಗೆ?

By | 17/10/2019

ಇಸ್ರೊದಲ್ಲಿ ಉದ್ಯೋಗ ಪಡೆಯುವ ಕನಸಿದೆಯೇ? ಶ್ರೀಮಂತರು ಮಾತ್ರವಲ್ಲದೆ ಬಡವರೂ ಇಸ್ರೊ ಸೇರುವ ಕನಸು ರೂಪಿಸಿಕೊಳ್ಳಬಹುದು. ಇಸ್ರೊ ಸೇರುವ ಕನಸಿರುವವರು ಎಸ್‍ಎಸ್‍ಎಲ್‍ಸಿಯಲ್ಲಿ ಅತ್ಯುತ್ತಮ ಅಂಕ ಪಡೆಯಿರಿ. ನಂತರ ನಮ್ಮ ಶಕ್ತಿ ಅನುಸಾರ ಸರಕಾರಿ ಅಥವಾ ಖಾಸಗಿ ಸಂಸ್ಥೆಯಲ್ಲಿ ಪಿಯುಸಿಗೆ ಸೇರಿರಿ. ನೆನಪಿಡಿ: ಪಿಯುಸಿಯಲ್ಲಿ ವಿಜ್ಞಾನವನ್ನು (ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ) ಆಯ್ಕೆ ಮಾಡಿಕೊಳ್ಳಬೇಕು. ಸಿಬಿಎಸ್‍ಇ ಪಠ್ಯಕ್ರಮ ಓದಿದರೆ ಇನ್ನೂ ಉತ್ತಮ. ಪಿಯುಸಿ ಸಮಯದಲ್ಲಿ ಜೆಇಇ ಮೇನ್ಸ್ ಮತ್ತು ಅಡ್ವಾನ್ಸಡ್ ಪರೀಕ್ಷೆ ಬರೆಯಬೇಕು. ಅಡ್ವಾನ್ಸಡ್‍ನಲ್ಲಿ ಸಾಧ್ಯವಿರುವಷ್ಟು ಅತ್ಯುತ್ತಮ ರ್ಯಾಂಕ್ ಪಡೆಯಬೇಕು. ಪಿಯುಸಿಯಲ್ಲಿ ಶೇಕಡ 75ಕ್ಕಿಂತ… Read More »