Category Archives: Education

‘ರಾಷ್ಟ್ರೀಯ ಶಿಕ್ಷಣ ನೀತಿ’ ಯಂತೆ ಇನ್ಮುಂದೆ ಶಿಕ್ಷಕರ ಆಯ್ಕೆ ಪ್ರಕ್ರಿಯೆ ಯಾವ ರೀತಿ ಗೊತ್ತಾ? ‘ ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

By | 25/08/2021

ಆಗಸ್ಟ್‌ 23,2021 ರಿಂದ ರಾಜ್ಯದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ( NEP) – 2020ರ ಅನುಸಾರವಾಗಿ ತರಗತಿ, ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿದೆ. ಈ ರಾಷ್ಟ್ರೀಯ ಶಿಕ್ಷಣ ‌ನೀತಿಯಂತೆ ಶಿಕ್ಷಕರ ಆಯ್ಕೆ ಪ್ರಕ್ರಿಯೆ ಹೇಗೆ ನಡೆಯಲಿದೆ ಎಂಬ ಬಗ್ಗೆ ಹಾಗೂ ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಇಸ್ರೊದಲ್ಲಿ ಉದ್ಯೋಗ ಪಡೆಯಬೇಕೆ? ಐಸ್ಯಾಟ್ (ಐಎಸ್‍ಎಟಿ) ಕುರಿತು ಇಲ್ಲಿದೆ ವಿವರ

By | 20/08/2021

ಶ್ರೀಮಂತರು ಮಾತ್ರವಲ್ಲದೆ ಬಡವರೂ ಇಸ್ರೊ ಸೇರುವ ಕನಸು ರೂಪಿಸಿಕೊಳ್ಳಬಹುದು. ಇಸ್ರೊ ಸೇರುವ ಕನಸಿರುವವರು ಎಸ್‍ಎಸ್‍ಎಲ್‍ಸಿಯಲ್ಲಿ ಅತ್ಯುತ್ತಮ ಅಂಕ ಪಡೆಯಿರಿ. ನಂತರ ನಮ್ಮ ಶಕ್ತಿ ಅನುಸಾರ ಸರಕಾರಿ ಅಥವಾ ಖಾಸಗಿ ಸಂಸ್ಥೆಯಲ್ಲಿ ಪಿಯುಸಿಗೆ ಸೇರಿರಿ. ನೆನಪಿಡಿ: ಪಿಯುಸಿಯಲ್ಲಿ ವಿಜ್ಞಾನವನ್ನು (ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ) ಆಯ್ಕೆ ಮಾಡಿಕೊಳ್ಳಬೇಕು. ಸಿಬಿಎಸ್‍ಇ ಪಠ್ಯಕ್ರಮ ಓದಿದರೆ ಇನ್ನೂ ಉತ್ತಮ. ಪಿಯುಸಿ ಸಮಯದಲ್ಲಿ ಜೆಇಇ ಮೇನ್ಸ್ ಮತ್ತು ಅಡ್ವಾನ್ಸಡ್ ಪರೀಕ್ಷೆ ಬರೆಯಬೇಕು. ಅಡ್ವಾನ್ಸಡ್‍ನಲ್ಲಿ ಸಾಧ್ಯವಿರುವಷ್ಟು ಅತ್ಯುತ್ತಮ ರ್ಯಾಂಕ್ ಪಡೆಯಬೇಕು. ಪಿಯುಸಿಯಲ್ಲಿ ಶೇಕಡ 75ಕ್ಕಿಂತ ಹೆಚ್ಚು ಅಂಕ ಪಡೆಯಬೇಕು. ಭಾರತದ… Read More »

ಸಿಬಿಎಸ್ ಇ 12 ನೇ ತರಗತಿ ಫಲಿತಾಂಶ: ಈ ಬಾರಿಯೂ ಬಾಲಕಿಯರೇ ಮೇಲುಗೈ

By | 31/07/2021

ಸಿಬಿಎಸ್ ಇ( ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ) 12 ನೇ ತರಗತಿ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಕೊರೊನಾ ಕಾರಣದಿಂದ ಪರೀಕ್ಷೆ ನಡೆದಿರಲಿಲ್ಲ. 30:30:40 ಅನುಪಾತದ ಅನುಸಾರದಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗಿದೆ. 10 ನೇ ಮತ್ತು 11 ನೇ ತರಗತಿ ಅಂತಿಮ ಪರೀಕ್ಷೆ ಹಾಗೂ 12 ನೇ ತರಗತಿಯಲ್ಲಿ ನಡೆಸಿದ ಪೂರ್ವ ಸಿದ್ಧತಾ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪರೀಕ್ಷೆಗೆ ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳ ಪೈಕಿ ಶೇ.99.37 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕಿಯರು… Read More »

ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ

By | 29/07/2021

ಸಾರ್ವಜನಿಕ ಶಿಕ್ಷಣ ಇಲಾಖೆ 2021-22 ನೇ ಸಾಲಿನ ‘ ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ತಾಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಮೂರು ಸಮಿತಿಗಳನ್ನು ರಚಿಸಿ, ಪ್ರಶಸ್ತಿಗೆ ಶಿಕ್ಷಕರನ್ನು ಆಯ್ಕೆ ಮಾಡಲಾಗುತ್ತದೆ. ಈ ಬಾರಿ ಆಯ್ಕೆ ಪ್ರಕ್ರಿಯೆಯು ಸಂಪೂರ್ಣವಾಗಿ ಆನ್ಲೈನ್ ಮೂಲಕವೇ ನಡೆಸಲಾಗುವುದು. ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕನಿಷ್ಠ 10 ವರ್ಷ ಶಿಕ್ಷಕರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪಡೆದ ಶಿಕ್ಷಕರು ಅರ್ಜಿ ಸಲ್ಲಿಸುವಂತಿಲ್ಲ ಎಂದು ಇಲಾಖೆ ಸ್ಪಷ್ಟ… Read More »

ಕಡ್ಡಾಯ ಶಿಕ್ಷಣ ಕಾಯ್ದೆಯಡಿ ಆಯ್ಕೆಯಾದ ಮಕ್ಕಳನ್ನು ಆ.3 ರೊಳಗೆ ದಾಖಲಿಸಲು ಶಿಕ್ಷಣ ಇಲಾಖೆ ಸೂಚನೆ

By | 27/07/2021

ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆಯ್ಕೆಯಾದ ಮಕ್ಕಳನ್ನು ಆ‌.3 ರೊಳಗೆ ಸಂಬಂಧಪಟ್ಟ ಶಾಲೆಗಳಿಗೆ ದಾಖಲು ಪಡಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಕೋರಿದೆ. ಖಾಸಗಿ ಅನುದಾನಿತ ಹಾಗೂ ಅನುದಾ‌ನರಹಿತ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕಾಗಿ 6776 ಅರ್ಜಿ ಪರಿಗಣಿಸಿ ಜು.22 ರಂದು ಎರಡನೇ ಸುತ್ತಿನ ಲಾಟರಿಯನ್ನು‌ ಆನ್ಲೈನ್ ಮೂಲಕ ನಡೆಸಲಾಗಿದೆ. ಈ ಪ್ರಕ್ರಿಯೆಯಲ್ಲಿ 764 ಮಂದಿ ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಸೀಟು ಹಂಚಿಕೆಯ ಮಾಹಿತಿಯನ್ನು ಆಯ್ಕೆಯಾದ ಮಕ್ಕಳ ಪೋಷಕರ ನೋಂದಾಯಿತ ಮೊಬೈಲ್ ಸಂಖ್ಯೆ ಗೆ ಕಳುಹಿಸಲಾಗಿದೆ.

ICSE ಮತ್ತು ISE ಫಲಿತಾಂಶ ನಾಳೆ ಪ್ರಕಟ

By | 23/07/2021

ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ ತಮ್ಮ ಪ್ರಕಟಣೆಯಲ್ಲಿ ಐಸಿಎಸ್ ಇ ( ಹತ್ತನೇ ತರಗತಿ) ಮತ್ತು ಐಎಸ್ ಸಿ ( 12 ನೇ ತರಗತಿ) ಪರೀಕ್ಷೆಯ ಫಲಿತಾಂಶವು ನಾಳೆ ಅಪರಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ತಿಳಿಸಿದೆ. ಕೊರೊನಾ ಕಾರಣದಿಂದ ಐಸಿಎಸ್ ಇ ಮತ್ತು ಐಎಸ್ಸಿ ವಿದ್ಯಾರ್ಥಿಗಳಿ ತಮ್ಮ ಉತ್ತರ ಪತ್ರಿಕೆ ಮರು ಮೌಲ್ಯ ಮಾಪನಕ್ಕೆ ಅರ್ಜಿ‌ ಸಲ್ಲಿಸಲು ಈ ಬಾರಿ ಸಾಧ್ಯವಿಲ್ಲ. ವಿದ್ಯಾರ್ಥಿಗಳಿಗೆ ತಮ್ಮ ಫಲಿತಾಂಶದ ಕುರಿತು ಆಕ್ಷೇಪಣೆ ಇದ್ದರೆ ಯಾವ ಕಾರಣಕ್ಕಾಗಿ ಮರು ಮೌಲ್ಯಮಾಪನ ನಡೆಸಬೇಕು… Read More »