Category Archives: Education

ಐಟಿಐ ಪಾಸಾದ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

By | 22/07/2021

ಜಿಲ್ಲಾ, ತಾಲೂಕು ಆಸ್ಪತ್ರೆಗಳು ಸೇರಿದಂತೆ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಮ್ಲಜನಕ ಘಟಕಗಳನ್ನು ಸ್ಥಾಪಿಸಲಾಗುವುದರಿಂದ ಅವುಗಳ ನಿರ್ವಹಣೆ ಹಾಗೂ ಕಾರ್ಯಾಚರಣೆಗೆ ಐಟಿಐ ವಿದ್ಯಾರ್ಥಿಗಳನ್ನು ನೇಮಕ ಮಾಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ‌ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಇಂದು ಬೆಂಗಳೂರಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಐಟಿಐನಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಆಕ್ಸಿಜನ್ ಘಟಕಗಳ ನಿರ್ವಹಣೆ ಕಾರ್ಯಾಚರಣೆ ಕುರಿತ ಆನ್ಲೈನ್ ತರಬೇತಿಗೆ ವರ್ಚುವಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಐಟಿಐ ಪಾಸಾದವರಿಗೆ ಉದ್ಯೋಗ ಭರವಸೆಯನ್ನು ನೀಡಿದ್ದಾರೆ. ರಾಜ್ಯದ ಪ್ರತಿಯೊಂದು ಆಸ್ಪತ್ರೆಯಲ್ಲಿ ಆಕ್ಸಿಜನ್… Read More »

ಪ್ರಾಧ್ಯಾಪಕರ ವರ್ಗಾವಣೆಯ ತಾತ್ಕಾಲಿಕ ಪಟ್ಟಿ ಬಿಡುಗಡೆ

By | 22/07/2021

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕ ವರ್ಗದ ವರ್ಗಾವಣೆಗೆ ಅರ್ಹ ಪ್ರಾಧ್ಯಾಪಕರ‌ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸರಕಾರಿ ಇಂಜಿನಿಯರಿಂಗ್, ಪದವಿ ಕಾಲೇಜುಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆಗೆ ಒಳಪಡಲಿರುವ ಬೋಧಕರು, ಗ್ರಂಥಪಾಲಕರು, ಕ್ರೀಡಾ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು, ಸರಕಾರಿ‌ ಪಾಲಿಟೆಕ್ನಿಕ್ ಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆಗೆ ಒಳಪಡಲಿರುವ ಉಪನ್ಯಾಸಕರ ಉಳಿದ ಮೂಲ ವೃಂದದ ವಲಯವಾರು ಪಟ್ಟಿ, ವಿಶೇಷ ಪ್ರಕರಣಗಳಡಿ ವರ್ಗಾವಣೆಯ ಕಾಯ್ದಿರಿಸಿದ ಬೋಧಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದು ವರ್ಗಾವಣಾ ತಾತ್ಕಾಲಿಕ ಆದ್ಯತಾ ಪಟ್ಟಿಯಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ, ಜು.23 ರೊಳಗೆ… Read More »

ಬಡ ಮಕ್ಕಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

By | 22/07/2021

‘ ಕೃಷಿಕ್ ಸರ್ವೋದಯ‌ ಫೌಂಡೇಶನ್ ‘ ಸಂಸ್ಥೆ ಪ್ರಸಕ್ತ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಪಿಯುಸಿ, ಸ್ನಾತಕ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಕೋರ್ಸ್ ಗಳಲ್ಲಿ ಉತ್ತೀರ್ಣರಾಗಿ ವಿದ್ಯಾಭ್ಯಾಸ ಮುಂದುವರಿಸಲಿರುವ ಗ್ರಾಮೀಣ ಬಡ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ‌ಯನ್ನು ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಬಡ ಅಭ್ಯರ್ಥಿಗಳು ಆದಾಯ, ಆಸ್ತಿ ಸೇರಿ ಕೆಲವು ದೃಢೀಕರಣ ಪತ್ರ ಹಾಗೂ ದಾಖಲೆಗಳ ಸಹಿತ ಅರ್ಜಿಯನ್ನು ಆ.20 ರೊಳಗೆ ನಂ.15, 2 ನೇ ಹಂತ, ಗಾಲ್ಫ್‌ ಅವೆನ್ಯೂ ರಸ್ತೆ, ಹಳೆ ವಿಮಾನ ನಿಲ್ದಾಣ ರಸ್ತೆ, ಕೋಡಿಹಳ್ಳಿ ಬೆಂಗಳೂರು ‌- 560008… Read More »

ದ್ವಿತೀಯ ಪಿಯುಸಿ ರಿಸಲ್ಟ್ ಜುಲೈ 20 ಕ್ಕೆ

By | 17/07/2021

ಪಿ.ಯು.ಬೋರ್ಡ್ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಜು.20 ರಂದು ( ಮಂಗಳವಾರ) ಪ್ರಕಟಿಸಲಿದೆ. ಕೋವಿಡ್ ಸೋಂಕು ಪ್ರಕರಣದಿಂದಾಗಿ 2020-21 ನೇ ಸಾಲಿನ ದ್ವಿತೀಯ ಪರೀಕ್ಷೆ ರದ್ದು ಗೊಳಿಸಿರುವ ಇಲಾಖೆ , ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳು, ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕ ಹಾಗೂ ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿ ಫಲಿತಾಂಶ ಪ್ರಕಟಿಸಲಿದೆ. 2020-21 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಹೊಸ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಫಲಿತಾಂಶ ಪ್ರಕಟಿಸುವ ಸಲುವಾಗಿ ಇಲಾಖೆಯು… Read More »

ಎಸ್ ಸಿ ವಿದ್ಯಾರ್ಥಿಗಳಿಗೆ ಉಚಿತ ಸ್ಕಾಲರ್ಶಿಪ್ ಇ ಕಾರ್ಡ್ ವಿತರಣೆ

By | 16/07/2021

ಮೆಟ್ರಿಕ್ ನಂತರ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಬಗ್ಗೆ ಕೇಂದ್ರ ಸರಕಾರದ ಮಾರ್ಗಸೂಚಿಗಳನ್ನು ಜಾರಿಗೆ ತರುವ ಮೊದಲ ರಾಜ್ಯ ಕರ್ನಾಟಕ ಎಂದು ಆಡಳಿತ ಸುಧಾರಣಾ ಮತ್ತು ಸಿಬ್ಬಂದಿ ಇಲಾಖೆ ( ಇ ಆಡಳಿತ ) ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ ಗುರುವಾರ ಹೇಳಿದರು. ಪರಿಶಿಷ್ಟ ಜಾತಿ ( ಎಸ್ ಸಿ) ವಿದ್ಯಾರ್ಥಿಗಳ ಮೆಟ್ರಿಕ್ ನಂತರ ಆಧಾರ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು, ಅಂತಿಮ ಬೋರ್ಡ್ ಪರೀಕ್ಷೆಯ ನೋಂದಣಿ ಸಂಖ್ಯೆ ಬಳಸಿಕೊಂಡು ಫ್ರೀ ( ಉಚಿತ) ಸ್ಕಾಲರ್ಶಿಪ್ ಇ-… Read More »

SSLC ಪರೀಕ್ಷಾ ಪ್ರವೇಶಗಳಿಗೆ ಸಮಸ್ಯೆಗಳಿಗೆ ಸಂಪರ್ಕಿಸಲು ದೂರವಾಣಿ ಸಂಖ್ಯೆ

By | 16/07/2021

2020-21 ನೇ ಸಾಲಿನ ಜುಲೈ -2021 ರಲ್ಲಿ ನಡೆಯಲಿರುವ ‌ಎಸ್.ಎಸ್.ಎಲ್.ಸಿ ವಾರ್ಷಿಕ ‌ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ( ಅದರಲ್ಲೂ ವಿಶೇಷವಾಗಿ ವಲಸೆ ವಿದ್ಯಾರ್ಥಿಗಳಿಗೆ) ಪರೀಕ್ಷಾ ಪ್ರವೇಶ ಪ್ರಕಾರ ಕುರಿತು ಸಮಸ್ಯೆಗಳಿದ್ದಲ್ಲಿ ಸಂಬಂಧಿಸಿದ ಜಿಲ್ಲಾ ನೋಡಲ್ ಅಧಿಕಾರಿಗಳನ್ನು/ ಜಿಲ್ಲಾ‌ಉಪನಿರ್ದೇಶಕರು‌( ಆಡಳಿತ) ರವರನ್ನು ಕೆಳಕಂಡ ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಿ ಪರಿಹಾರ ಪಡೆಯಲು ತಿಳಿಸಿದೆ.