Category Archives: ರಾಜಕೀಯ

4000 ಅತಿಥಿ ಉಪನ್ಯಾಸಕರ ಹುದ್ದೆಗೆ ನೇಮಕಾತಿ – ಸುದ್ದಿಜಾಲ ನ್ಯೂಸ್

By | 31/12/2021

ಬೆಂಗಳೂರು : ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಮಾಡಿಕೊಳ್ಳುವ ಪ್ರಕ್ರಿಯೆ ವಿಳಂಬವಾಗುವುದರಿಂದ ಶಿಕ್ಷಕರ ಕೊರತೆ ನೀಗಿಸಲು 4 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರಕಾರ ನಿರ್ಧರಿಸಿದೆ. ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿಯಿರುವ ಅತಿಥಿ ಶಿಕ್ಷಕರ 2 ನೇ ಹಂತದ ನೇಮಕಾತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ. ರಾಜ್ಯದಲ್ಲಿ ಒಟ್ಟು 30 ಸಾವಿರಕ್ಕೂ ಅಧಿಕ ಶಿಕ್ಷಕರ ಹುದ್ದೆ ಖಾಲಿಯಿದ್ದು, ಮೊದಲ ಹಂತದಲ್ಲಿ 18 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ‌. ಇನ್ನೂ 12 ಸಾವಿರಕ್ಕೂ ಅಧಿಕ ಹುದ್ದೆ… Read More »

ಶೀಘ್ರವೇ 2,318 ಗ್ರಾ.ಪಂ, ಪಿಡಿಒ, ಕಾರ್ಯದರ್ಶಿಗಳ ಹುದ್ದೆಗಳ ನೇಮಕಾತಿ- ಸುದ್ದಿಜಾಲ ನ್ಯೂಸ್

By | 18/12/2021

ರಾಜ್ಯ ಸರಕಾರವು ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದೆ. ಶೀಘ್ರವೇ ರಾಜ್ಯದಲ್ಲಿ 2,318 ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ( PDO) ಮತ್ತು ಕಾರ್ಯದರ್ಶಿಗಳ ಹುದ್ದೆಗಳನ್ನು ಭರ್ತಿ ಮಾಡಲಾಗುವುದರ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಗ್ರಾಮಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳ 2,318 ಹುದ್ದೆಗಳು ಖಾಲಿ ಇದ್ದು, 727 ಪಿಡಿಒಗಳು, 635 ಕಾರ್ಯದರ್ಶಿ ಗ್ರೇಡ್ – 1 ಮತ್ತು 856 ಕಾರ್ಯದರ್ಶಿ ಗ್ರೇಡ್ 2 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಕೆಲವು ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ… Read More »

ಶಿಕ್ಷಕ ವೃತ್ತಿ ನಿರೀಕ್ಷೆಯಲ್ಲಿರುವವರಿಗೆ ಸಿಹಿಸುದ್ದಿ : ಸರಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರಕಾರ ನಿರ್ಧಾರ

By | 11/12/2021

ರಾಜ್ಯದ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಒಟ್ಟು 15,000 ಶಿಕ್ಷಕರ ನೇಮಕಾತಿ ಮಾಡಲು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ. ಈ ಕುರಿತು ಅತೀ ಶೀಘ್ರದಲ್ಲೇ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟ್ವೀಟ್ ಮಾಡಿದ್ದಾರೆ. ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು ” ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ 10,000 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಹಾಗೂ ಕಲ್ಯಾಣ ವೃಂದದ ಪದವೀಧರ ಪ್ರಾಥಮಿಕ ಶಾಲಾ… Read More »

ಶೀಘ್ರವೇ ಕಲ್ಯಾಣ ಕರ್ನಾಟಕ ಭಾಗದ 16,000 ಹುದ್ದೆ ಭರ್ತಿ

By | 06/12/2021

ಬೀದರ್ : ಶೀಘ್ರವೇ ಕಲ್ಯಾಣ ಕರ್ನಾಟಕ ಭಾಗದ 16 ಸಾವಿರ ಹುದ್ದೆ ಭರ್ತಿ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ 16 ಸಾವಿರ ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಶೀಘ್ರವೇ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂಬುದಾಗಿ, ಸಿಎಂ ಅವರು ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಪರ ಪ್ರಚಾರ ಸಮಾವೇಶದಲ್ಲಿ ಮಾತನಾಡುತ್ತಾ ಹೇಳಿದ್ದಾರೆ. ಹೆಣ್ಣು ಮಕ್ಕಳ ಅಭಿವೃದ್ಧಿಗೆ ವಿಶೇಷ ಯೋಜನೆ ಸದ್ಯದಲ್ಲೇ ರೂಪಿಸಲಾಗುವುದು. ವಸತಿ‌ ರಹಿತರಿಗೆ ಮಾರ್ಚ್ 31 ರೊಳಗೆ ಎಲ್ಲರಿಗೂ… Read More »

3000 ಭೂಮಾಪಕ ಹುದ್ದೆಗಳ ನೇಮಕಾತಿ ಆದೇಶ ವಾಪಸ್ ಪಡೆದ ರಾಜ್ಯಸರಕಾರ- ಸುದ್ದಿಜಾಲ ನ್ಯೂಸ್

By | 05/12/2021

ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ‌‌ ಇಲಾಖೆಯಲ್ಲಿ ಹೊಸದಾಗಿ ಪರವಾನಗಿ ಭೂಮಾಪಕರನ್ನು ಆಯ್ಕೆ ಮಾಡಲು ಹೊರಡಿಸಿದ ಅಧಿಸೂಚನೆಯನ್ನು ರಾಜ್ಯಸರಕಾರ ಹಿಂಪಡೆದಿದೆ. ರಾಜ್ಯದ ವಿವಿಧ ಜಿಲ್ಲೆಗಳಿಗೆ ಸೇರಿದಂತೆ ಒಟ್ಟು 3 ಸಾವಿರ ಲ್ಯಾಂಡ್ ಸರ್ವೇಯರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 03-12-2021 ರಿಂದ 31-12-2021 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚನೆ ನೀಡಲಾಗಿತ್ತು. ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಹೊಸದಾಗಿ ಭೂಮಾಪಕರನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ದಿನಾಂಕ 01.12.2021 ರಂದು ಹೊರಡಿಸಿರುವ ಅಧಿಸೂಚನೆಯನ್ನು ವಾಪಸ್ ಪಡೆಯಲಾಗಿದೆ ಎಂದು ಭೂಮಾಪನ… Read More »

ಕೆಪಿಟಿಸಿಎಲ್ : 1899 ಹುದ್ದೆಗಳ ಭರ್ತಿಗೆ ಚಾಲನೆ ನೀಡಿದ ಸಚಿವ ವಿ. ಸುನಿಲ್ ಕುಮಾರ್

By | 11/10/2021

ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 1899 ಕಿರಿಯ ಪವರ್ ಮ್ಯಾನ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಇಂದು ಅದರ ಮೊದಲ ಹಂತವಾಗಿ ಸಾಂಕೇತಿಕವಾಗಿ 21 ಜನರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಗುತ್ತಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಬೆಂಗಳೂರಿನ ಕಾವೇರಿ ಭವನದಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಸಭಾಂಗಣದಲ್ಲಿ ಈ ಹದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡಿ ಮಾತನಾಡುತ್ತಿದ್ದರು. ಕೆಪಿಟಿಸಿಎಲ್ ನ… Read More »