Category Archives: ರಾಜ್ಯ

ಕಾನ್ಸ್ ಸ್ಟೇಬಲ್ ಭರ್ತಿ ಗೆ ಕ್ರಮ

By | 03/09/2021

ಪೊಲೀಸ್ ಇಲಾಖೆಯಲ್ಲಿ 4 ಸಾವಿರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ ಎಂದಯ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. “ಆಧುನಿಕ ಎಎಸ್ ಎಲ್ ಲ್ಯಾಬ್ ಬಲವರ್ಧನೆ ಮಾಡುವ ಜೊತೆಗೆ ಹೆಚ್ಚಾಗುತ್ತಿರುವ ಸೈಬರ್ ಕ್ರೈಂಗಳಿಗೆ ಕಡಿವಾಣ ಹಾಕಲು ಅತ್ಯಾಧುನಿಕ ಉಪಕರಣಗಳು ಮತ್ತು ತಂತ್ರಜ್ಞಾನಗಳನ್ನು ಒದಗಿಸುವ ಮೂಲಕ ಪೊಲಿಸ್ ಇಲಾಖೆ ಬಲಪಡಿಸಲು ಸರಕಾರ ಕ್ರಮ ಕೈಗೊಂಡಿದೆ” ಎಂದರು.

ಸಿವಿಲ್ ಪೊಲೀಸ್ ಸಬ್-ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ತರಬೇತಿ

By | 31/08/2021

ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್‌ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ತರಬೇತಿ ನೀಡಲು ನಿರ್ಧರಿಸಲಾಗಿದೆ. ಆಸಕ್ತರು ಸೆಪ್ಟೆಂಬರ್, 07 ರೊಳಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು… Read More »

ವಿವಿಧ ವೃಂದದ ಖಾಲಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

By | 31/08/2021

ನವದೆಹಲಿಯ ಕರ್ನಾಟಕ ಭವನದ ವಿವಿಧ ವೃಂದದ ಖಾಲಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಕಾಯುವಿಕೆ ಎರಡನೇ ಪಟ್ಟಿ ಪ್ರಕಟಿಸಲಾಗಿದೆ.

ಟಿಟಿಟಿಇ ನಿಂದ ಉಚಿತ ತರಬೇತಿ

By | 13/08/2021

ಟೊಯೋಟ ಟೆಕ್ನಿಕಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ನಿಂದ ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಪೂರ್ಣ ಶಿಶಿಕ್ಷು ತರಬೇತಿ ಯೋಜ‌ನೆ ಅಡಿಯಲ್ಲಿ ಉಚಿತ ತಾಂತ್ರಿಕ ತರಬೇತಿ ನೀಡುತ್ತದೆ. ಆಸಕ್ತರು ಭಾಗವಹಿಸಬಹುದು. ಅವಧಿ : 3 ವರ್ಷ ಅರ್ಹತೆ : ಎಸ್ ಎಸ್ ಎಲ್ ಸಿ ತೇರ್ಗಡೆಗೊಂಡು ಗಳಿಸಿದ ಅಂಕ ಟ್ರೇಡ್ : ಆಟೋಮೊಬೈಲ್ ಅಸೆಂಬ್ಲಿ, ಆಟೋಮೊಬೈಲ್ ಪೈಂಟ್, ಆಟೋಮೊಬೈಲ್ ವೆಲ್ಡ್, ಮೆಕಟ್ರಾ‌ನಿಕ್ಸ್ ಟಿಟಿಟಿಐ ನಲ್ಲಿ‌ ಪ್ರವೇಶ ಪಡೆಯಲು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಉತ್ತೀರ್ಣಗೊಳ್ಳಬೇಕು. ನೋಂದಣಿ ಮಾಡಲು ಈ ಲಿಂಕನ್ನು ಕ್ಲಿಕ್ ಮಾಡಿ.… Read More »

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ

By | 12/08/2021

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ‌ಇಲ್ಲಿ ಖಾಲಿ‌ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ : ಖಾಯಂ ಬೋಧಕ ಹುದ್ದೆಗಳು ಮತ್ತು ಇತರೆ ಶೈಕ್ಷಣಿಕ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ಜಾಲತಾಣ https://www.kslu.karnataka.gov.in ನಿಂದ ಪಡೆದು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕವನ್ನು ಆನ್ಲೈನ್ SBI collect, Karnataka state law university,Hubballi ಮುಖಾಂತರ ಸಲ್ಲಿಸಬೇಕು.

ಉತ್ತರಕನ್ನಡ ಜಿಲ್ಲೆಯ ಆಯುಷ್ ಇಲಾಖೆಯಲ್ಲಿ ಉದ್ಯೋಗವಕಾಶ

By | 10/08/2021

ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ ಕಾರವಾರ, ಉತ್ತರ ಕನ್ನಡ ಜಿಲ್ಲೆಯ ಆಯುಷ್ ಇಲಾಖೆಯಲ್ಲಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರ ಒಂದು ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿವೆ ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆ ಹೆಸರು : ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರುಹುದ್ದೆ – 1ಮೀಸಲಾತಿ : ಸಾಮಾನ್ಯ ಸಮತಳ ಮೀಸಲಾತಿ ಕನ್ನಡ ಮಾಧ್ಯಮ ಅಭ್ಯರ್ಥಿಗರಿಷ್ಠ ವಯೋಮಿತಿ : 36 ವರ್ಷಗಳುವಿದ್ಯಾರ್ಹತೆ : ಅಂಗೀಕೃತ ವಿಶ್ವವಿದ್ಯಾಲಯದ ಆಯುಷ್ ಪದವಿ, ಎಂಬಿಎ ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಯಾವುದೇ… Read More »