ಕೇಂದ್ರ ಸರಕಾರದ ಎಲ್ಲಾ ಹುದ್ದೆಗಳಿಗೆ ಇನ್ನು ಒಂದೇ ಪರೀಕ್ಷೆ – ಸುದ್ದಿಜಾಲ ನ್ಯೂಸ್

By | 04/12/2021

ನವದೆಹಲಿ : ಕೇಂದ್ರ ಸರಕಾರದ ವಿವಿಧ ಇಲಾಖೆಗಳಲ್ಲಿನ ನೇಮಕಾತಿ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕವಾಗಿಸಲು ರಾಷ್ಟ್ರೀಯ ನೇಮಕಾತಿ ಸಂಸ್ಥೆ ಒಂದೇ ಪರೀಕ್ಷೆಯನ್ನು ನಡೆಸಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಗುರುವಾರ ಹೇಳಿದ್ದಾರೆ.

ರಾಜ್ಯಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಪೂರಕ ಪ್ರಶ್ನೆಗಳಿಗೆ ಉತ್ತರಿಸಿದ ಸಿಬ್ಬಂದಿ ಮತ್ತು ತರಬೇತಿ ಖಾತೆ ರಾಜ್ಯ ಸಚಿವ ಸಿಂಗ್ ಈ ಮಾಹಿತಿಯನ್ನು ನೀಡಿದ್ದಾರೆ. ಈ ವರ್ಷ ಸಂಯೋಜಿತ ಅರ್ಹತಾ ಪರೀಕ್ಷೆಯನ್ನು ಪ್ರಾರಂಭಿಸಲು ಸರಕಾರ ಯೋಜಿಸಿದೆ. ಆದರೆ ಅದು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು. ಹೊಸ ವ್ಯವಸ್ಥೆಯಲ್ಲಿ ದೇಶದ ಪ್ರತಿ ಜಿಲ್ಲೆಗೂ ಕನಿಷ್ಠ ಒಂದು ಪರೀಕ್ಷಾ ಕೇಂದ್ರವಿದ್ದು, ಯಾರಿಗೂ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು. ಆರಂಭಿಕ ಹಂತದಲ್ಲಿ ಬ್ಯಾಂಕ್ , ರೈಲ್ವೆ ಉದ್ಯೋಗದ ಆಯ್ಕೆ ಬರಲಿದೆ ಎಂದರು. SSC ಬಂಧಿಸಿದ ಹುದ್ದೆಗಳನ್ನು ಈ ಪರೀಕ್ಷೆ ಯಲ್ಲಿ ಸೇರಿಸಲಾಗುವುದು ಮತ್ತು ಭವಿಷ್ಯದಲ್ಲಿ ಈ ವ್ಯವಸ್ಥೆಯನ್ನು ವಿಸ್ತರಿಸಲಾಗುವುದು ಅಂತ ಅವರು ಹೇಳಿದರು.

ಅಂಕಿಅಂಶಗಳನ್ನು ಉಲ್ಲೇಖಿಸಿದ ಸಿಂಗ್, ಈ ಸರಕಾರದ ಏಳು ವರ್ಷಗಳ ಅಧಿಕಾರ ಅವಧಿಯಲ್ಲಿ, ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಿರುವುದು ಮಾತ್ರವಲ್ಲದೇ ಹೊಸ ಹುದ್ದೆಗಳ ಸೃಷ್ಟಿಗೆ ಒತ್ತು ನೀಡಲಾಗಿದೆ ಎಂದು ಹೇಳಿದರು.

ಕೆಲವೊಮ್ಮೆ ನೇಮಕಾತಿಗಳು ವಿಳಂಬವಾಗುತ್ತವೆ ಎಂದು ಅವರು ಒಪ್ಪಿಕೊಂಡರು. ಆದರೆ ಸರಕಾರದ ಕಡೆಯಿಂದ ಯಾವುದೇ ವಿಳಂಬವಿಲ್ಲ. ಬಡ್ತಿಯಲ್ಲಿ ಇತರೆ ಹಿಂದುಳಿದ ವರ್ಗಗಳ ( ಒಬಿಸಿ) ಮೀಸಲಾತಿಗೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿಷಯ ಇನ್ನೂ ನ್ಯಾಯಾಲಯದಲ್ಲಿದೆ ಅಂತ ತಿಳಿಸಿದರು.

Leave a Reply

Your email address will not be published. Required fields are marked *