ಮೊಬೈಲ್ ನಲ್ಲಿಯೇ ಸಿಇಟಿ ಗೆ ಅರ್ಜಿ

By | 16/06/2021

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ( ಕೆಇಎ) ವಿದ್ಯಾರ್ಥಿ ಸ್ನೇಹಿ ಯೋಜನೆ ರೂಪಿಸಿದ್ದು, ಸಾಮಾನ್ಯ ಪ್ರವೇಶ ಪರೀಕ್ಷೆ ( ಸಿಇಟಿ) ತೆಗೆದುಕೊಳ್ಳಲು (2021) ಇಚ್ಛಿಸುವ ವಿದ್ಯಾರ್ಥಿಗಳು ಮೊಬೈಲ್ ನಲ್ಲೇ ಮನೆಯಲ್ಲಿಯೇ ಕುಳಿತು ಅರ್ಜಿ ಸಲ್ಲಿಸಬಹುದು. ಈ ಮೊದಲು ಕಂಪ್ಯೂಟರ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇತ್ತು‌. ಆದರೆ ಬಹುತೇಕ ವಿದ್ಯಾರ್ಥಿಗಳು ಕೊರೊನಾ ಅಲೆ ವ್ಯಾಪಕವಾಗಿ ಹರಡಿರುವುದರಿಂದ ಎಲ್ಲರೂ ಹಳ್ಳಿಯಲ್ಲಿ ನೆಲೆಸಿದ್ದಾರೆ. ಕಂಪ್ಯೂಟರ್ ಇಲ್ಲದವರು ಸೈಬರ್ ಸೆಂಟರ್ ಅಥವಾ ಕಂಪ್ಯೂಟರ್ ಮೂಲಕ ಅರ್ಜಿ ಸಲ್ಲಿಸುವುದಕ್ಕೆ ಕಷ್ಟವಾಗುವುದರಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿದ್ಯಾರ್ಥಿಗಳಿಗೆ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಲು ಅನುವು ಮಾಡಿಕೊಟ್ಟಿದೆ. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಥಿಗಳಿಗಾಗಿ ಕೆಇಎ ಬಿಡುಗಡೆ ಮಾಹಿತಿ ಕೈಪಿಡಿಯನ್ನು ಓದಿ ಅನಂತರ ಅರ್ಜಿ ಸಲ್ಲಿಸುವುದು ಸೂಕ್ತ.

ಅರ್ಜಿಯನ್ನು ನೇರವಾಗಿ ಆನ್ಲೈನ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡುವ ಮುನ್ನ, ಮಾದರಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅನಂತರ‌ ಆನ್ಲೈನ್ ನಲ್ಲಿ ಭರ್ತಿ ಮಾಡುವುದರಿಂದ ತಪ್ಪುಗಳು ಸಂಭವಿಸದಂತೆ ಎಚ್ಚರ ವಹಿಸುವುದು. ಅರ್ಜಿ ಸಲ್ಲಿಸುವ ಪ್ರಮಾಣ ಪತ್ರಗಳ ಮಾಹಿತಿಯನ್ನು ಮಾತ್ರ ದಾಖಲು ಮಾಡಬೇಕಿದೆ. ಪ್ರಮಾಣ ಪತ್ರಗಳ ಸ್ಕ್ಯಾನ್ ಕಾಪಿಯನ್ನು ಅಪ್ ಲೋಡ್ ಮಾಡುವ ಅವಶ್ಯಕತೆ ಇಲ್ಲದಿರುವುದರಿಂದ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕೆಇಎ ವೆಬ್‌ಸೈಟ್‌ ನೋಡಬಹುದಾಗಿದೆ.

Leave a Reply

Your email address will not be published. Required fields are marked *