ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ನಡೆಸಲಾಗುವ ಸಿಇಟಿ ( ಸಾಮಾನ್ಯ ಪ್ರವೇಶ ಪರೀಕ್ಷೆ) ಗೆ ಜೂನ್.15 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆರಂಭವಾಗಿದೆ.
ಆರ್ಕಿಟೆಕ್ಟ್, ಫಾರ್ಮಸಿ, ಇಂಜಿನಿಯರಿಂಗ್, ಪಶುವೈದ್ಯ, ಕೃಷಿ ವಿಜ್ಞಾನ ಕೋರ್ಸ್ ಗಳಿಗೆ ಪ್ರವೇಶ ಪರೀಕ್ಷೆ ಮೂಲಕ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲಾಗುವುದು.
ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದುಗೊಳಿಸಿರುವ ಕಾರಣದಿಂದ ಅರ್ಹತಾ ಅಂಕಗಳು ಇಲ್ಲದಿರುವುದರಿಂದ ಎಲ್ಲರೂ ಪರೀಕ್ಷೆ ಬರೆಯಬಹುದು.
ಸಿಇಟಿಯಲ್ಲಿ ಪಡೆಯುವ ಅಂಕಗಳೇ ರ್ಯಾಂಕಿಂಗ್, ಸೀಟು ಹಂಚಿಕೆಗೆ ಮಾನದಂಡವಾಗಿರುವುದು ಎಂದು ಉನ್ನತ ಶಿಕ್ಷಣ ಇಲಾಖೆ ತಿಳಿಸಿದೆ.
ಅರ್ಜಿ ಸಲ್ಲಿಸಲು ಜು.10, ಶುಲ್ಕ ಪಾವತಿಸಲು ಜು.13 ಕೊನೆಯ ದಿನಾಂಕವಾಗಿರುತ್ತದೆ. ಜು.16 ಮತ್ತು ಜು.20 ಪ್ರಮಾಣ ಪತ್ರ ಸಲ್ಲಿಕೆಗೆ ಮತ್ತು ಜು.19 ಮತ್ತು ಜು. 22 ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆ.13 ರಂದು ಪ್ರವೇಶ ಪತ್ರ ಬಿಡುಗಡೆ ಮಾಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.













Got a Questions?
Find us on Socials or Contact Us and we’ll get back to you as soon as possible.