CISF : 249 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ ವೇತನ ₹ 81,100/-, 12 ನೇ ತರಗತಿ ಪಾಸಾದವರಿಗೆ ಆದ್ಯತೆ- ಸುದ್ದಿಜಾಲ ನ್ಯೂಸ್

By | 21/12/2021

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 249 ಹೆಡ್ ಕಾನ್ ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳೆ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ‌

ಕ್ರೀಡಾ ಕೋಟಾದ ವಿರುದ್ಧ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಭಾರತದಾದ್ಯಂತ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಆಫ್ ಲೈನ್ ಅರ್ಜಿ ಸಲ್ಲಿಕೆಯ ಆರಂಭಿಕ ದಿನಾಂಕ : ಡಿಸೆಂಬರ್ 20, 2021

ಆಫ್ ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : ಮಾರ್ಚ್ 31, 2022 ರ ಸಂಜೆ 5 ಗಂಟೆಗೆ.

ವಿದ್ಯಾರ್ಹತೆ : ಈ ಹುದ್ದೆಗಳಿಗೆ 12 ನೇ ತರಗತಿ/ ಇಂಟರ್ ಮೀಡಿಯೇಟ್ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು‌

ವಯೋಮಿತಿ : ಅಭ್ಯರ್ಥಿಗಳು ಆಗಸ್ಟ್ 1, 2021 ರ ಅನ್ವಯ ಕನಿಷ್ಠ 18 ರಿಂದ ಗರಿಷ್ಠ 23 ವರ್ಷ ವಯೋಮಿತಿಯೊಳಗಿರಬೇಕು. ಪ.ಜಾ/ಪ.ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗರ ₹25,500/- ರಿಂದ ₹81,100/- ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ : ದೈಹಿಕ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಇತರೆ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ : ₹100/- ಅರ್ಜಿ ಶುಲ್ಕವನ್ನು ಡಿ ಡಿ / ಪೋಸ್ಟಲ್ ಅರ್ಡರ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 31, 2022 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *