ಸಿವಿಲ್ ಪೊಲೀಸ್ ಸಬ್-ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ತರಬೇತಿ

ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್‌ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ತರಬೇತಿ ನೀಡಲು ನಿರ್ಧರಿಸಲಾಗಿದೆ.

ಆಸಕ್ತರು ಸೆಪ್ಟೆಂಬರ್, 07 ರೊಳಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು ಕರಾಮುವಿ ಕುಲಸಚಿವ ಪ್ರೊ.ಆರ್.ರಾಜಣ್ಣ ಅವರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ 0821-2515944 ಈ ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದು.

error: Content is protected !!