ದಾವಣಗೆರೆ ಅಂಗನವಾಡಿ ಕೇಂದ್ರಗಳಲ್ಲಿ 19 ಕಾರ್ಯಕರ್ತೆ ಹಾಗೂ 101 ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ : ಸುದ್ದಿಜಾಲ ನ್ಯೂಸ್

By | 19/12/2021

ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 05 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 19 ಅಂಗನವಾಡಿ ಕಾರ್ಯಕರ್ತೆ ಮತ್ತು 101 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಸಂಬಂಧ ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕಿಸಲು ಕೋರಿದೆ.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭದ ದಿನಾಂಕ : 18-12-2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18/01/2022 ಸಂಜೆ 5.30 ಗಂಟೆ

ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆ ಹಾಗೂ ಸಹಾಯಕಿಯಾಗಿ ಗೌರವಸೇವೆ ಸಲ್ಲಿಸಲು 18 ರಿಂದ 35 ವರ್ಷದೊಳಗಿನ ಸಾಮಾನ್ಯ ವರ್ಗದವರು ಮತ್ತು ಕಾರ್ಯಕರ್ತೆಯರ ನೇಮಕಾತಿಗೆ 18 ರಿಂದ 45 ವರ್ಷದೊಳಗಿನ ವಿಕಲಚೇತನ ವರ್ಗದ ಅರ್ಹ ಸ್ಥಳೀಯ ( ಅದೇ ಗ್ರಾಮದ ) ಮಹಿಳಾ ಅಭ್ಯರ್ಥಿಗಳಿಂದ ಮಾತ್ರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯಾಗಲು ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯಾಗಲು ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿದ್ದು ಗರಿಷ್ಠ 9 ನೇ ತರಗತಿ ತೇರ್ಗಡೆ.

ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *