KCET 2021: ವೃತ್ತಿಪರ ಕೋರ್ಸ್ ಗಳಿಗೆ ಸಿಇಟಿ ಅಂಕವೇ ಮಾನದಂಡ

By | 08/06/2021

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ,ಎಲ್ಲರಲ್ಲೂ ಹಲವಾರು ಗೊಂದಲಗಳು ಉಂಟಾಗಿದ್ದವು. ಆದರೆ ವಿದ್ಯಾರ್ಥಿಗಳಿಗೆ ಸರಕಾರವು ಬಿಗ್ ರಿಲೀಫ್ ಸುದ್ದಿಯೊಂದನ್ನು ನೀಡಿದೆ. ವೃತ್ತಿ ಪರ ಕೋರ್ಸ್ ಗಳಿಗೆ ಸಿಇಟಿ ಪರೀಕ್ಷೆಯ ಅಂಕಗಳನ್ನು ಮಾತ್ರ ಪರಿಗಣಿಸಲಾಗುವುದು ಎಂದು ಡಿಸಿಎಂ ಮತ್ತು ಉನ್ನತ ಶಿಕ್ಷಣ ಸಚಿವರಾದ ಸಿಡಿಎಂ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ವೃತ್ತಿಪರ (ಸಿಇಟಿ) ಕೋರ್ಸ್ ಗಳಿಗೆ ದ್ವಿತೀಯ ಪಿಯುಸಿಯ ಅಂಕಗಳನ್ನು ಪರಿಗಣಿಸಲಾಗುವುದಿಲ್ಲ. ಸಿಇಟಿ ಪರೀಕ್ಷೆಯ ಅಂಕಗಳ ಆಧಾರದ ಮೇಲೆಯೇ ಸೀಟುಗಳನ್ನು ಹಂಚಲಾಗುವುದು.

ಜೂನ್ 15 ರಂದು ಆನ್ಲೈನ್ ನಲ್ಲಿ ರಿಜಿಸ್ಟರ್ ಮಾಡಿಕೊಳ್ಳ ಬಹುದು ಎಂದು ಸಚಿವರು ಹೇಳಿದ್ದಾರೆ. ಆಗಸ್ಟ್ 28 ಮತ್ತು 29 ರಂದು ಸಿಇಟಿ ಪರೀಕ್ಷೆ ನಡೆಯಲಿದೆ.

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ವೃತ್ತಿಪರ ಕೋರ್ಸ್ ಗಳಿಗೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸಚಿವ ಸುರೇಶ್ ಕುಮಾರ್ ಸಲಹೆಯ ಮೇರೆಗೆ ಸರಕಾರವು ಈ ನಿರ್ಧಾರ ಕೈಗೊಂಡಿದೆ.

Author: Mallika Putran

ಕರ್ನಾಟಕ ಬೆಸ್ಟ್‌.ಕಾಂ Blogger

Leave a Reply

Your email address will not be published. Required fields are marked *