ESIC ಯಲ್ಲಿ ಭರ್ಜರಿ ಉದ್ಯೋಗವಕಾಶ : 3865 ಹುದ್ದೆಗಳು, ಹೆಚ್ಚಿನ ಮಾಹಿತಿ ಇಲ್ಲಿದೆ- ಸುದ್ದಿಜಾಲ ನ್ಯೂಸ್

By | 30/12/2021

ರಾಜ್ಯ ನೌಕರರ ವಿಮಾ ನಿಗಮ ( ಇಎಸ್ ಐಸಿ) ವು 2021-22 ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಿ, ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : ಅಪ್ಪರ್ ಡಿವಿಷನ್ ಕ್ಲರ್ಕ್ – 1736 ಹುದ್ದೆಗಳು
ಮಲ್ಟಿ ಟಾಸ್ಕಿಂಗ್ ಸ್ಟಾಫ್ : 1964 ಹುದ್ದೆಗಳು
ಶೀಘ್ರಲಿಪಿಗಾರ – 165 ಹುದ್ದೆಗಳು

ಒಟ್ಟು 3865 ಹುದ್ದೆಗಳು

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಜನವರಿ‌ 15, 2022

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 15, 2022

ವಿದ್ಯಾರ್ಹತೆ : ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪದವಿ, ಮೆಟ್ರಿಕ್ಯುಲೇಷನ್ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ವಯೋಮಿತಿ : ಫೆ. 15, 2022 ರ ಅನ್ವಯ ಕನಿಷ್ಠ 18 ರಿಂದ ಗರಿಷ್ಠ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 500/- ರೂ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ/ಇಲಾಖೆಯ ಅಭ್ಯರ್ಥಿಗಳು, ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 250/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ವೇತನ : ಅಪ್ಪರ್ ಡಿವಿಷನ್ ಕ್ಲರ್ಕ್ ಮತ್ತು ಶೀಘ್ರಲಿಪಿಗಾರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 25,500/- ರಿಂದ 81,100/- ರೂ. ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 56,900/- ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ರಾಜ್ಯ ನೌಕರರ ವಿಮಾ ನಿಗಮ ನೇಮಕಾತಿಯ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಮಾಹಿತಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜನವರಿ 15, 2022 ರಿಂದ ಫೆಬ್ರವರಿ 15, 2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *