ಉಚಿತ ಕೋಳಿಸಾಕಾಣೆ, ಮೋಟರ್ ರೀವೈಂಡಿಂಗ್ ತರಬೇತಿ : ಹೆಚ್ಚಿನ ಮಾಹಿತಿ ಇಲ್ಲಿದೆ – ಸುದ್ದಿಜಾಲ ನ್ಯೂಸ್

By | 17/11/2021

ಶಿವಮೊಗ್ಗ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹೊಳಲೂರು ಇಲ್ಲಿ 30 ದಿನಗಳ ಮೋಟರ್ ರೀವೈಂಡಿಂಗ್, 10 ದಿನಗಳ ಕಾಲ ಕೋಳಿ ಸಾಕಾಣಿಕೆ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು, ಆಸಕ್ತ ನಿರುದ್ಯೋಗಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು.

ಅಭ್ಯರ್ಥಿಯು ಗ್ರಾಮೀಣ ಬಿಪಿಎಲ್ ಕಾರ್ಡ್ ಹೊಂದಿರಬೇಕು.

ಉಚಿತ ತರಬೇತಿಯನ್ನು ಪಡೆದ ನಂತರ ಸ್ವ ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಸಮಯದಲ್ಲಿ ಉಚಿತ ಊಟ- ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಡಿಸೆಂಬರ್ 2021 ರಿಂದ ಪ್ರಾರಂಭವಾಗುತ್ತದೆ. ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂಬರ್, ವಿದ್ಯಾರ್ಹತೆ ಮತ್ತು ವಯಸ್ಸಿನ ವಿವರಗಳೊಂದಿಗೆ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ- ಉದ್ಯೋಗ ತರಬೇತಿ ಸಂಸ್ಥೆ, ಹೊನ್ನಾಳಿ ರಸ್ತೆ, ಹೊಳಲೂರು – 577216 ( ಶಿವಮೊಗ್ಗ ತಾಲ್ಲೂಕು ) ಇವರಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊ. 9481955721, 9743429595, 9449371579 ಅಥವಾ ಇ-ಮೇಲ್ : [email protected] ನ್ನು ಸಂಪರ್ಕಿಸುವುದು

Leave a Reply

Your email address will not be published. Required fields are marked *