ಸರಕಾರಿ ವಕೀಲರ ನೇಮಕಕ್ಕೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆಯ 2 ನೇ ಹೆಚ್ಚುವರಿ ಜಿಲ್ಲಾ ಸರಕಾರಿ ವಕೀಲರ ಹುದ್ದೆ ಅವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ವಕೀಲರ ಹುದ್ದೆಗೆ ನೇಮಕ ಮಾಡಿಕೊಳ್ಳಲು ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ವಕೀಲರು ಕನಿಷ್ಠ 10 ವರ್ಷಗಳ ಕಾಲ ವಕೀಲ ವೃತ್ತಿ ಪೂರೈಸಿರಬೇಕು. ಅರ್ಜಿ ಸಲ್ಲಿಸಲು ಆ.25 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯ ಬೆಂಗಳೂರು ನಗರ ಜಿಲ್ಲೆ , ಕೆಂಪೇಗೌಡ ರಸ್ತೆ, ಬೆಂಗಳೂರು – 560009 ಅಥವಾ ದೂ. 080-22211292, 22211106 ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅನಿತಾ ಲಕ್ಷ್ಮೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!