ಶಿಕ್ಷಕ ವೃತ್ತಿ ನಿರೀಕ್ಷೆಯಲ್ಲಿರುವವರಿಗೆ ಸಿಹಿಸುದ್ದಿ : ಸರಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರಕಾರ ನಿರ್ಧಾರ

By | 11/12/2021

ರಾಜ್ಯದ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಒಟ್ಟು 15,000 ಶಿಕ್ಷಕರ ನೇಮಕಾತಿ ಮಾಡಲು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ. ಈ ಕುರಿತು ಅತೀ ಶೀಘ್ರದಲ್ಲೇ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟ್ವೀಟ್ ಮಾಡಿದ್ದಾರೆ.

ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು ” ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ 10,000 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಹಾಗೂ ಕಲ್ಯಾಣ ವೃಂದದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ 5,000 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಈ ಕುರಿತು ಶೀಘ್ರದಲ್ಲೇ ನೇಮಕ ಪ್ರಕ್ರಿಯೆ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *