ಹಾಸನ ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ : ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ – ಸುದ್ದಿಜಾಲ ನ್ಯೂಸ್

By | 08/01/2022

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಹಾಸನ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕೂಲಿಕಾರರನ್ನು ಸಂಘಟಿಸಿ ಕಾಮಗಾರಿಗಳಲ್ಲಿ ತೊಡಗಿಸುವ ಮೂಲಕ ಹೆಚ್ಚು ಮಾನವ ದಿನಗಳನ್ನು ಸೃಜನೆ ಮಾಡಲು ಮತ್ತು ಅನುಷ್ಠಾನಗೊಳಿಸುವ ಕಾಮಗಾರಿಗಳ ಕಾರ್ಯಸ್ಥಳದ ಮೇಲ್ವಿಚಾರಣೆ ಮಾಡಲು ಬಿ.ಎಫ್.ಟಿ ( ಬೇರ್ ಫೂಟ್ ಟೆಕ್ನಿಷಿಯನ್ಸ್ )ಗಳನ್ನು ಕ್ರೀಯಾಶೀಲವಾಗಿ ತೊಡಗಿಸಿಕೊಳ್ಳಬೇಕಾಗಿರುವುದರಿಂದ ಬಿ.ಎಫ್.ಟಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 06-01-2022

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-01-2022

ಹುದ್ದೆ : ಬಿ.ಎಫ್.ಟಿ

ಹುದ್ದೆಗಳ ಸಂಖ್ಯೆ : 16 ಹುದ್ದೆಗಳು

ವಿದ್ಯಾರ್ಹತೆ : ಎಸ್ ಎಸ್ ಎಲ್ ಸಿ ಪಾಸಾದವರು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 45 ವರ್ಷ ವಯೋಮಿತಿ ಹೊಂದಿರಬೇಕು.

ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ N.I.C ಯ ಜಿಲ್ಲಾ ವೆಬ್ಸೈಟ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Leave a Reply

Your email address will not be published. Required fields are marked *