ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಯೋಜನೆಯಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ವೃಂದಗಳ ಈ ಕೆಳಕಂಡ ಹುದ್ದೆಗಳಿಗೆ 2021-22 ನೇ ಸಾಲಿಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹುದ್ದೆಯ ವಿವರ : ಮಕ್ಕಳ ತಜ್ಞರು, ಸ್ತ್ರೀ ರೋಗ ತಜ್ಞರು, ಫಿಜಿಶಿಯನ್, ಆರ್ ಬಿಎಸ್ ಕೆ ವೈದ್ಯಾಧಿಕಾರಿಗಳು/ ಎಂಬಿಬಿಎಸ್ ಬಿಎಎಂಎಸ್ ವೈದ್ಯರು, ಆರ್ ಬಿಎಸ್ ಕೆ ವೈದ್ಯಾಧಿಕಾರಿಗಳು, ಆರ್ ಕೆ ಎಸ್ ಕೆ ಆಪ್ತ ಸಮಾಲೋಚಕರು, ಪ್ರಯೋಗಾ ಶಾಲಾ ತಂತ್ರಜ್ಞರು, ಶುಶ್ರೂಷಕಿಯರು, ಹಿರಿಯ ಮಹಿಳಾ ಆರೋಗ್ಯ ಸಹಾಯಕಿಯರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ದಿನಾಂಕ 17-08-2021 ರಂದು ಬೆಳಿಗ್ಗೆ 10.00 ಗಂಟೆಗೆ ಆಸಕ್ತಿಯುಳ್ಳ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಮೂಲ ದಾಖಲೆಗಳೊಂದಿಗೆ 1 ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಕೆ.ಎನ್.ಟಿ.ಬಿ ಸ್ಯಾನಿಟೋರಿಯಂ ಆಸ್ಪತ್ರೆ ಆವರಣ, ಬಂಗಾರಪೇಟೆ ರಸ್ತೆ, ಕೋಲಾರ ಇಲ್ಲಿಗೆ ಹಾಜರಾಗುವುದು.
ನೇರ ಸಂದರ್ಶನದ ದಿನಾಂಕದಂದು ಬೆಳಿಗ್ಗೆ 10.00 ರಿಂದ ಅಪರಾಹ್ನ 1:00 ಗಂಟೆಯೊಳಗೆ ಸಂದರ್ಶನ ಸ್ಥಳದಲ್ಲಿ ಹೆಸರನ್ನು ನೊಂದಾಯಿಸಿಕೊಂಡ ಅಭ್ಯರ್ಥಿಗಳನ್ನು ಮಾತ್ರ ಸಂದರ್ಶನಕ್ಕೆ ಪರಿಗಣಿಸಲಾಗುವುದು.









Got a Questions?
Find us on Socials or Contact Us and we’ll get back to you as soon as possible.