ಹೈಕೋರ್ಟ್ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಬಾರದು ಎಂದು ಆದೇಶ ಹೊರಡಿಸಿದೆ.
ಈ ಬಾರಿ ರಾಜ್ಯ ಸರಕಾರವು ಪಿಯುಸಿ ರಿಪೀಟರ್ಸ್ ಮಾತ್ರ ಈ ಬಾರಿ ಪರೀಕ್ಷೆಯನ್ನು ಬರೆಯಬೇಕೆಂದು ಘೋಷಿಸಿತ್ತು. ಹೈಕೋರ್ಟ್ ನಲ್ಲಿ ಈ ಬಗ್ಗೆ ಅರ್ಜಿ ಸಲ್ಲಿಸಲಾಗಿತ್ತು. ಸಮಗ್ರ ನಿರ್ಧಾರ ತೆಗೆದುಕೊಳ್ಳುವವರೆಗೆ ಫಲಿತಾಂಶವನ್ನು ಪ್ರಕಟಿಸಬಾರದು ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಮಧ್ಯಂತರ ಆದೇಶ ಹೊರಡಿಸಿದೆ.
76 ಸಾವಿರ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕೆಂದು ತಿಳಿಸಲಾಗಿದೆ. 5.92 ಲಕ್ಷ ಪಿಯು ವಿದ್ಯಾರ್ಥಿಗಳ ಫಲಿತಾಂಶ ಬರಬೇಕಾಗಿದೆ. ಹೈಕೋರ್ಟ್ ” ತಜ್ಞರ ಸಮಿತಿಯೊಂದಿಗೆ ಸಮಾಲೋಚನೆ ನಡೆಸಿ ಸರಕಾರವು ಸರಿಯಾದ ತೀರ್ಮಾನ ತೆಗೆದುಕೊಳ್ಳುವವರೆಗೂ ಫಲಿತಾಂಶ ಪ್ರಕಟ ಮಾಡಬಾರದು “ಎಂದು ಹೇಳಿದೆ. ಮುಂದಿನ ವಿಚಾರಣೆಯು ಜುಲೈ 5 ರಂದು ನಡೆಯಲಿದೆ.













Got a Questions?
Find us on Socials or Contact Us and we’ll get back to you as soon as possible.