InStem ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 20-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-03-2021
ಅರ್ಜಿ ಸಲ್ಲಿಕೆ: INSTEM ನಲ್ಲಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.
ಹುದ್ದೆಗಳ ವಿವರ : ಸೀನಿಯರ್ ಟೆಕ್ನಿಕಲ್ ಆಫೀಸರ್, ಟೆಕ್ನಿಕಲ್ ಆಫೀಸರ್, ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗನುಸಾರವಾಗಿ ಬಿ.ಇ/ಬಿ.ಟೆಕ್ ವಿದ್ಯಾರ್ಹತೆ ಯನ್ನು ಪಡೆದಿರಬೇಕು.
ವಯೋಮಿತಿ : ಅಭ್ಯರ್ಥಿಗಳು ಹುದ್ದೆಗಳಿಗನುಸಾರವಾಗಿ 35 ರಿಂದ 56 ವರ್ಷದೊಳಗಿನವರಾಗಿರಬೇಕು.
ಅರ್ಜಿ ಶುಲ್ಕ: ಅರ್ಜಿ ಸಲ್ಲಿಸಲು ಅನ್ ರಿಸರ್ವ್ಡ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ , ಮಹಿಳಾ ಅಭ್ಯರ್ಥಿಗಳು, ಅಂಗವಿಕಲ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲೈನ್ ಪಾವತಿ ವಿಧಾನದ ಮೂಲಕ ಮಾತ್ರಅರ್ಜಿ ಶುಲ್ಕವನ್ನು ಪಾವತಿಸಬಹುದು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸ್ಕಿಲ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ಇನ್ಸ್ಟೆಮ್ ವೆಬ್‌ಸೈಟ್ ಗೆ ಲಾಗಿನ್ ಆಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ವೆಬ್‌ಸೈಟ್ ಲಿಂಕ್ ಈ ಕೆಳಗಿನಂತಿವೆ : https://www.instem.res.in/jobportal









Got a Questions?
Find us on Socials or Contact Us and we’ll get back to you as soon as possible.