ಜಿಲ್ಲಾ, ತಾಲೂಕು ಆಸ್ಪತ್ರೆಗಳು ಸೇರಿದಂತೆ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಮ್ಲಜನಕ ಘಟಕಗಳನ್ನು ಸ್ಥಾಪಿಸಲಾಗುವುದರಿಂದ ಅವುಗಳ ನಿರ್ವಹಣೆ ಹಾಗೂ ಕಾರ್ಯಾಚರಣೆಗೆ ಐಟಿಐ ವಿದ್ಯಾರ್ಥಿಗಳನ್ನು ನೇಮಕ ಮಾಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಇಂದು ಬೆಂಗಳೂರಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಐಟಿಐನಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಆಕ್ಸಿಜನ್ ಘಟಕಗಳ ನಿರ್ವಹಣೆ ಕಾರ್ಯಾಚರಣೆ ಕುರಿತ ಆನ್ಲೈನ್ ತರಬೇತಿಗೆ ವರ್ಚುವಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಐಟಿಐ ಪಾಸಾದವರಿಗೆ ಉದ್ಯೋಗ ಭರವಸೆಯನ್ನು ನೀಡಿದ್ದಾರೆ.
ರಾಜ್ಯದ ಪ್ರತಿಯೊಂದು ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕಗಳನ್ನು ಸ್ಥಾಪನೆ ಮಾಡಲು ನಿರ್ಧರಿಸಿದ್ದರಿಂದ, ಇಲ್ಲಿಯವರೆಗೆ 350 ಘಟಕಗಳನ್ನು ಅಳವಡಿಸಲಾಗಿದೆ. ಇವೆಲ್ಲವುದರ ನಿರ್ವಹಣೆಯ ಜವಾಬ್ದಾರಿಯನ್ನು ಐಟಿಐ ವಿದ್ಯಾರ್ಥಿಗಳಿಗೆ ವಹಿಸುವುದು ಎಂದು ಡಿಸಿಎಂ ಹೇಳಿದರು.
ಟಾಟಾ ಟೆಕ್ನಾಲಜೀಸ್ ಜತೆ ಸರಕಾರ ರಾಜ್ಯದಲ್ಲಿ ಹಳೆಯ ಸ್ಥಿತಿಯಲ್ಲಿರುವ 150 ಐಟಿಐಗಳನ್ನು ಉನ್ನತೀಕರಣ ಮಾಡಲು ಒಪ್ಪಂದ ಮಾಡಿಕೊಂಡಿದೆ. ಹಾಗಾಗಿ ಐಟಿಐ ವಿದ್ಯಾರ್ಥಿಗಳು ಆಕ್ಸಿಜನ್ ಘಟಕಗಳನ್ನು ನಿರ್ವಹಿಸುವುದು ಮಾತ್ರವಲ್ಲ, ಆಕ್ಸಿಜನ್ ತಯಾರಿಕಾ ಯಂತ್ರಗಳನ್ನು ತಯಾರಿಸುವ ಕುಶಲತೆಯನ್ನು ಬೆಳೆಸಿಕೊಳ್ಳಬೇಕು ಎಂದು ಡಿಸಿಎಂ ಸಲಹೆ ನೀಡಿದ್ದಾರೆ.


















Got a Questions?
Find us on Socials or Contact Us and we’ll get back to you as soon as possible.