ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದಲ್ಲಿ ಅಪರ ಸರಕಾರಿ ವಕೀಲರ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ : ಅಪರ ಸರ್ಕಾರಿ ವಕೀಲ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 2021 ಎಪ್ರಿಲ್ 5ರ ಸಂಜೆ 4 ಗಂಟೆ
ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ವಿದ್ಯಾರ್ಹತೆ : ಕಾನೂನು ಪದವಿ ಪಡೆದಿರಬೇಕು.
ಅನುಭವ : 7 ವರ್ಷಗಳ ಕಾಲ ವಕೀಲ ವೃತ್ತಿಯಲ್ಲಿ ಅನುಭವ ಹೊಂದಿರುವ ಹಾಗೂ ಅರ್ಹತೆಯುಳ್ಳ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ತಮ್ಮ ಪೂರ್ಣ ಹೆಸರು, ಜನ್ಮದಿನಾಂಕ, ವಿದ್ಯಾರ್ಹತೆ, ಸದ್ಯದ ಅಂಚೆ ವಿಳಾಸ, ಜಿಲ್ಲಾ ಬಾರ್ ಅಸೋಸಿಯೇಷನ್ ನೋಂದಣಿ ವಿವರ, ಕರ್ನಾಟಕ ಬಾರ್ ಅಸೋಸಿಯೇಶನ್ ನಲ್ಲಿ ನೋಂದಣಿ ವಿವರ, ದಿವಾಣಿ ನ್ಯಾಯಾಲಯದಲ್ಲಿ ನಡೆಸಿದ ಪ್ರಕರಣಗಳ ಸಂಖ್ಯೆ, ಕ್ರಿಮಿನಲ್ ನ್ಯಾಯಾಲಯದಲ್ಲಿ ನಡೆಸಿದ ಪ್ರಕರಣಗಳ ಸಂಖ್ಯೆ, ಜಾತಿ ಮತ್ತು ಮತ್ತಿತರ ಪ್ರಮಾಣಪತ್ರಗಳನ್ನು (ಸಂಬಂಧಪಟ್ಟ ತಹಶೀಲ್ದಾರರ ಕಾರ್ಯಾಲಯದಿಂದ ಪಡೆದ) ದಾಖಲೆಗಳು ಹಾಗೂ ವೈಯಕ್ತಿಕ ವಿವರಗಳನ್ನೊಳಗೊಂಡ ಅರ್ಜಿಯನ್ನು ನಿಗದಿಪಡಿಸಲಾದ ಕೊನೆ ದಿನಾಂಕದೊಳಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ: ಕಲಬುರಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯ









Got a Questions?
Find us on Socials or Contact Us and we’ll get back to you as soon as possible.