430 ಸರಕಾರಿ ಪ್ರಥಮ ದರ್ಜೆ ಕಾಲೇಜು, 87 ಸರಕಾರಿ ಪಾಲಿಟೆಕ್ನಿಕ್ ಹಾಗೂ 14 ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲು ವ್ಯಾಸಂಗ ಮಾಡುತ್ತಿರುವ 1.55 ಲಕ್ಷ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆಯಡಿ ಸರಕಾರ ಟ್ಯಾಬ್ ಪಿಸಿ ವಿತರಿಸಲಿದೆ.
ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ಸಾಂಕೇತಿಕವಾಗಿ ವಿಧಾನಸೌಧದಲ್ಲಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಲಿದ್ದು, ಆ ಬಳಿಕ ಶಾಸಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲಿ ವಿತರಣೆ ಮಾಡಲಿದ್ದಾರೆ. ಕೆಲ ವಿದ್ಯಾರ್ಥಿಗಳು ಕೂಡ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆ, ಡಿಜಿಟಲ್ ಅಂತರವೂ ಅಳಿಸಿಹಾಕುವ ನಿಟ್ಟಿನಲ್ಲಿ ಸರಕಾರವು ಬೃಹತ್ ಪ್ರಮಾಣದಲ್ಲಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ವಿದ್ಯಾರ್ಥಿಗಳಿಗೆ ವಿತರಿಸುತ್ತಿದೆ.ಇದಕ್ಕಾಗಿ ಸರಕಾರ 165 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ.
ಸರಕಾರಿ ಕಾಲೇಜುಗಳಲ್ಲಿ 2,500 ಸ್ಮಾರ್ಟ್ ಕ್ಲಾಸ್ ರೂಂಗಳಿಗೆ ಚಾಲನೆ ನೀಡಲಾಗುತ್ತಿದೆ. ಬ್ಯಾಂಕ್ವೆಟ್ ಹಾಲ್ ನಲ್ಲಿ ಸ್ಮಾರ್ಟ್ ಕ್ಲಾಸ್ ರೂಂ ನ ಒಂದರ ಪ್ರಾತ್ಯಕ್ಷಿಕೆಯೂ ಇರುತ್ತದೆ ಎಂದು ಡಿಸಿಎಂ ತಿಳಿಸಿದ್ದಾರೆ.













Got a Questions?
Find us on Socials or Contact Us and we’ll get back to you as soon as possible.