ಗ್ರಾಮ ಪಂಚಾಯತಿಯಲ್ಲಿ ಒಟ್ಟು 1558 ಹುದ್ದೆಗಳ ಭರ್ತಿಗೆ ಆದೇಶ

By | 06/09/2021

ರಾಜ್ಯದ ಗ್ರಾಮ ಪಂಚಾಯತಿ ಕಾರ್ಯದರ್ಶಿ ( ಗ್ರೇಡ್ 2) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ರಾಜ್ಯ ಸರಕಾರ ನಿರ್ಧರಿಸಿ ಆದೇಶ ಪ್ರಕಟಿಸಿದೆ.

ಈ ಹುದ್ದೆಗಳಿಗೆ ಪ್ರಸ್ತುತ ಸೇವೆಯಲ್ಲಿರುವ ಗ್ರಾಮ ಪಂಚಾಯತಿ ನೌಕರರ ವೃಂದದಿಂದ ನೇರ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಿರುವುದು. ಇದರಿಂದ ಗ್ರಾಮ ಪಂಚಾಯತಿ ನೌಕರರಿಗೆ ಬಡ್ತಿ ಭಾಗ್ಯವೂ ದೊರೆಯಲಿದೆ.

ಕೊರೊನಾ ಕಾರಣದಿಂದಾಗಿ ನೇರ ನೇಮಕಾತಿ ಪ್ರಕ್ರಿಯೆಯನ್ನು ತೆರವುಗೊಳಿಸಲಾಗಿಸೆ. ಆ ಮೂಲಕ, ಹಲವು ವರ್ಷಗಳಿಂದ ಪದೋನ್ನತಿಗೆ ಕಾಯುತ್ತಿರುವ ಗ್ರಾಮ‌ ಪಂಚಾಯತಿಯ ವಿವಿಧ ವೃಂದಗಳ ಇದರ ಅನುಕೂಲ‌ ಪಡೆಯಲಿದೆ.

ಗ್ರಾಮ ಪಂಚಾಯತಿ ಕಾರ್ಯದರ್ಶಿ ( ಗ್ರೇಡ್ -2) ಒಟ್ಟು ಖಾಲಿ ಹುದ್ದೆಗಳು 1143 ಇದೆ. ಗ್ರಾಮ ಪಂಚಾಯತಿ ನೌಕರರಿಂದ 800 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ. ದ್ವಿತೀಯ ದರ್ಜೆ ಲೆಕ್ಕಸಹಾಯಕರ ಹುದ್ದೆಗಳ ಪೈಕಿ ಒಟ್ಟು 316 ಹುದ್ದೆಗಳು ಖಾಲಿ ಇದ್ದು, ಗ್ರಾಮ ಪಂಚಾಯತಿ ನೌಕರರಿಂದ 158 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್ 2) ಮತ್ತು ದ್ವಿತೀಯ ದರ್ಜೆ ಲೆಕ್ಕಸಹಾಯಕರ ಹುದ್ದೆಗಳಿಗೆ ಬಿಲ್ ಕಲೆಕ್ಟರ್, ಅಕೌಂಟೆಂಟ್, ಕ್ಲರ್ಕ್, ಟೈಪಿಸ್ಟ್, ಕ್ಲರ್ಕ್ ಕಮ್ ಡಾಟಾ ಎಂಟ್ರಿ ಅಪರೇಟರ್ ವೃಂದದ ಹುದ್ದೆಗಳಿಂದ ನೇರ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸುವಂತೆ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ( ಆರ್ ಡಿಪಿಆರ್) ಪ್ರಧಾನ ಕಾರ್ಯದರ್ಶಿ ಅವರು ಸೂಚಿಸಿದ್ದಾರೆ.

ಗ್ರಾಮ ಪಂಚಾಯತಿ ಕಾರ್ಯದರ್ಶಿ ( ಗ್ರೇಡ್ -2) ವೃಂದದ ಶೇಕಡ 70 ರಷ್ಟು ಹುದ್ದೆಗಳನ್ನು 3:2 ಅನುಪಾತದಲ್ಲಿ ನೇಮಕಾತಿಗೆ ಅವಕಾಶ ನೀಡಲಾಗಿದೆ. ಅಂದರೆ, ಮೊದಲ ಮೂರು ಹುದ್ದೆಗಳನ್ನು ಬಿಲ್ ಕಲೆಕ್ಟರ್ ವೃಂದದ ನೌಕರರಿಂದ, ನಂತರ ಎರಡು ಹುದ್ದೆಗಳನ್ನು ಅಕೌಂಟೆಂಟ್, ಕ್ಲರ್ಕ್, ಟೈಪಿಸ್ಟ್ ಕಂ ಡಾಟಾ ಎಂಟ್ರಿ ಅಪರೇಟರ್ ವೃಂದದ ಮೂಲಕ ನೇಮಕಾತಿ ಮಾಡಲಾಗುತ್ತದೆ.

ಗ್ರಾಮ ಪಂಚಾಯತಿಯಲ್ಲಿ ಕನಿಷ್ಠ 6 ವರ್ಷ ಕೆಲಸ ಮಾಡಿದ ಸಿಬ್ಬಂದಿ ನೇರ ನೇಮಕಾತಿಗೆ ಅರ್ಹತೆ ಪಡೆಯುತ್ತಾರೆ. ಈ ರೀತಿ ಬಡ್ತಿಗೆ ಅರ್ಹತೆ ಪಡೆದವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ 100 ಅಂಕಗಳ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದೆ. ಪ್ರಸ್ತುತ ಸೇವೆಯಲ್ಲಿರುವ ಸಿಬ್ಬಂದಿಯ ಜ್ಯೇಷ್ಠತಾ ಪಟ್ಟಿ ಮಾಡಿ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕದ ಆಧಾರದಲ್ಲಿ ಮೀಸಲಾತಿ ನಿಯಮ ಅನ್ವಯ ಆಯ್ಕೆಪಟ್ಟಿ ಪ್ರಕಟಿಸಬೇಕು ಎಂದು ಸೂಚಿಸಲಾಗಿದೆ. ಉಳಿದ ಶೇ.30 ರಷ್ಟು ಖಾಲಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ( ಕೆಇಎ) ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೃಂದದ ಶೇಕಡಾ 50 ರಷ್ಟು ಹುದ್ದೆಗಳನ್ನು 1:1 ಅನುಪಾತದಲ್ಲಿ ನೇಮಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಉಳಿದ ಶೇ.50 ರಷ್ಟು ಖಾಲಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ( ಕೆಇಎ) ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು.

Leave a Reply

Your email address will not be published. Required fields are marked *