ಕರ್ನಾಟಕ ಹೈಕೋರ್ಟ್ ನಲ್ಲಿ 150 ಟೈಪಿಸ್ಟ್ ಹುದ್ದೆ : ಡಿಗ್ರಿ ಪಾಸಾದವರಿಗೆ ಅವಕಾಶ, ಉತ್ತಮ ಸಂಬಳ

By | 28/10/2021

ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ 150 ಬೆರಳಚ್ಚುಗಾರರ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಅರ್ಜಿಗಳನ್ನು ಸ್ವೀಕರಿಸುವುದಕ್ಕೆ ನಿಗದಿಪಡಿಸಿರುವ ಕೊನೆಯ ದಿನಾಂಕದವರೆಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 28-10-2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-11-2021

ವೇತನ : ₹ 25,500 – ₹ 81,100

ಹುದ್ದೆಯ ಹೆಸರು : ಬೆರಳಚ್ಚುಗಾರ

ಹುದ್ದೆ ಸಂಖ್ಯೆ : 150

ವಿದ್ಯಾರ್ಹತೆ : ಯಾವುದೇ ವಿಷಯದಲ್ಲಿ ಪದವಿ ಮಾಡಿರಬೇಕು. ( ವಿಜ್ಞಾನ/ ಕಲೆ/ ವಾಣಿಜ್ಯ/ ವ್ಯವಹಾರ ನಿರ್ವಹಣೆ/ ಕಂಪ್ಯೂಟರ್ ಅಪ್ಲಿಕೇಶನ್)

ಆಂಗ್ಲ ಮತ್ತು ಕನ್ನಡದಲ್ಲಿ ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದರೊಂದಿಗೆ ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು ಕನಿಷ್ಠ ಶೇ.55 ಅಂಕಗಳೊಂದಿಗೆ, ಎಸ್ ಸಿ/ ಎಸ್ ಟಿ ಅಭ್ಯರ್ಥಿಗಳು ಕನಿಷ್ಠ ಶೇ.50 ಅಂಕಗಳೊಂದಿಗೆ ಪದವಿ ಪಾಸ್ ಮಾಡಿರಬೇಕು.

ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಆಯ್ಕೆಯಾದ ಅಭ್ಯರ್ಥಿಗಳು ಪ್ರಾರಂಭಿಕವಾಗಿ ಎರಡು ವರ್ಷಗಳ ಅವಧಿಗೆ ಅಥವಾ ಅಗತ್ಯವಿದ್ದರೆ ವಿಸ್ತರಿಸಬಹುದಾದ ಅವಧಿಗೆ ಪರಿವೀಕ್ಷಣಾರ್ಥಿಗಳಾಗಿರುತ್ತಾರೆ.

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಆಗಿರಬೇಕು.

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಎಸ್ ಸಿ/ ಎಸ್ ಟಿ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಮೀರಿರಬಾರದು.

Apply online

ನೋಟಿಫಿಕೇಶನ್

Leave a Reply

Your email address will not be published. Required fields are marked *