3000 ಭೂಮಾಪಕರ ಹುದ್ದೆಗೆ ಅರ್ಜಿ ಆಹ್ವಾನ, ಪಿಯು, ಬಿಇ, ಬಿಟೆಕ್, ಡಿಪ್ಲೋಮಾ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಿ, ಜ.21 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ

By | 29/12/2021


ಕರ್ನಾಟಕ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ‌ ಇಲಾಖೆಯು 3000 ಭೂಮಾಪಕರು ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಯ ಹೆಸರು : ಭೂಮಾಪಕರು

ಹುದ್ದೆಗಳ ಸಂಖ್ಯೆ : 3000

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-01-2022

ವಿದ್ಯಾರ್ಹತೆ : ದ್ವಿತೀಯ ಪಿಯುಸಿಯನ್ನು ವಿಜ್ಞಾನ ವಿಭಾಗದಲ್ಲಿ ಪಾಸ್ ಮಾಡಿರಬೇಕು. ಗಣಿತ ವಿಷಯದಲ್ಲಿ ಕನಿಷ್ಠ ಶೇ.60 ಅಂಕಗಳನ್ನು ಗಳಿಸಿದ ಬೇಕು.

ಬಿಇ ಸಿವಿಲ್/ ಬಿ.ಟೆಕ್ ಸಿವಿಲ್/ ಡಿಪ್ಲೋಮಾ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಸರಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ ಐಟಿಐ ಇನ್ ಸರ್ವೇ ಟ್ರೇಡ್ ನಲ್ಲಿ ಉತ್ತೀರ್ಣರಾಗಿರಬೇಕು. ಅಥವಾ

ಕರ್ನಾಟಕ ರಾಜ್ಯ ಸರಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡ್ ಆಂಡ್ ಸಿಟಿ ಸರ್ವೆಯಲ್ಲಿ ಪದವಿ ಪೂರ್ವ ಡಿಪ್ಲೋಮಾದಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು

ಅಥವಾ ರಾಜ್ಯ ಸರಕಾರದ ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ ಅಥವಾ ಸರ್ವೆ ಆಫ್ ಇಂಡಿಯಾ ಅಥವಾ ಸರಕಾರಿ ವಲಯಕ್ಕೆ ಒಳಪಟ್ಟು ಸಂಸ್ಥೆಗಳಲ್ಲಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕನಿಷ್ಠ 10 ವರ್ಷಗಳ ಭೂಮಾಪನಾ ಸೇವೆ ಸಲ್ಲಿಸಿ ನಿವೃತ್ತರಾದವರು ಸಹ ಪರವಾನಗಿ ಪಡೆಯಲು ಅರ್ಹರಿರುತ್ತಾರೆ.

ಅರ್ಜಿ ಶುಲ್ಕ : ರೂ.1000

ಅರ್ಜಿ ಸಲ್ಲಿಕೆ ವಿವರ : ವೆಬ್ಸೈಟ್ rdservices.karnataka.gov.in ನಲ್ಲಿ ಅಗತ್ಯ ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಬೇಕು. ಆನ್ಲೈನ್ ಹೊರತುಪಡಿಸಿ ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶ ಇರುವುದಿಲ್ಲ.

ವಯೋಮಿತಿ : ಕನಿಷ್ಠ 18 ವರ್ಷ ಪೂರೈಸಿರತಕ್ಕದ್ದು,ಗರಿಷ್ಠ 65 ವರ್ಷ ಮೀರಿರಬಾರದು.

ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *