ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ‌ ಒಕ್ಕೂಟ ನಿಗಮ( KOF) ದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ‌ ಒಕ್ಕೂಟ ನಿಗಮ ಚಿತ್ರದುರ್ಗ ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಯ ಸಂಪೂರ್ಣ ವಿವರ ಈ ಕೆಳಗಿನಂತಿವೆ.

ಹುದ್ದೆ : ಅಸಿಸ್ಟೆಂಟ್ ಎಕ್ಸಿಕ್ಯುಟಿವ್
ಸೀಡ್ಸ್ ಆಫೀಸರ್
ಕೆಮಿಸ್ಟ್

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 08,2021

ವಿದ್ಯಾರ್ಹತೆ : ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದ ಬಿಕಾಂ/ಬಿಬಿಎ/ಬಿಬಿಎಂ/ಕೆಮಿಸ್ಟ್ರಿ ಯಲ್ಲಿ ಬಿಎಸ್ಸಿ ಪದವಿ/ಕೃಷಿ ಪದವಿ ಹೊಂದಿರಬೇಕು.

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 21,400/- ರಿಂದ 62,600/-ವೇತನ ನಿಗದಿಯಾಗಿದೆ.

ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 500/- ಶುಲ್ಕ ಪಾವತಿಸಬೇಕಾಗುತ್ತದೆ. ಉಳಿದವರು ರೂ.1000/- ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ.

ವಯೋಮಿತಿ : ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು.

ಪ.ಜಾತಿ/ಪ.ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://kofchitradurga.com/ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮಾರ್ಚ್ 08, 2021ರ ಒಳಗೆ ಕಚೇರಿಗೆ ಅರ್ಜಿಯನ್ನು ಸಲ್ಲಿಸಬೇಕು. (ಸಂಜೆ 5.30 ರ ಒಳಗೆ)

ಅರ್ಜಿ ಸಲ್ಲಿಸಬೇಕಾದ ವಿಳಾಸ
ವ್ಯವಸ್ಥಾಪಕ ನಿರ್ದೇಶಕರು,
ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ, ಸಂಘಗಳ ಒಕ್ಕೂಟ ನಿಯಮಿತ ಫ್ಲಾಟ್ ಸಂಖ್ಯೆ:74/ಎ,
ಕೆಳಗಿಟೆ ಇಂಡಸ್ಟ್ರಿಯಲ್ ಏರಿಯಾ, ಚಿತ್ರದುರ್ಗ- 577501

error: Content is protected !!