SSLC Exam 2021: ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೂ ಪರೀಕ್ಷೆಗೆ ಅವಕಾಶ

By | 15/07/2021

ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಜುಲೈ 19 ಮತ್ತು ಜುಲೈ 22 ರಂದು ನಿಗದಿಯಾಗಿದೆ. ಪೂರ್ಣ ಶುಲ್ಕ ಕಟ್ಟದ ವಿದ್ಯಾರ್ಥಿಗಳೂ ಪರೀಕ್ಷೆ ಬರೆಯಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ. ಪ್ರವೇಶ ಪತ್ರವನ್ನು ಅವರಿಗೆ ನಿರಾಕರಿಸುವಂತಿಲ್ಲ ಎಂದು ಹೇಳಿದ್ದಾರೆ.

ಪರೀಕ್ಷೆಗೆ ಎಲ್ಲಾ ಸಿದ್ಧತೆಗಳು ನಡೆದಿದೆ. ಇದರ ಮಧ್ಯೆ ಪರೀಕ್ಷಾ ಶುಲ್ಕ ಪಾವತಿ ಮಾಡದಿದ್ದರೆ ಹಾಲ್ ಟಿಕೆಟ್ ನೀಡಲಾಗುವುದಿಲ್ಲ ಎಂಬ ಮಾತಿಗೆ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದೆಂದು ಕ್ರಮ ವಹಿಸಬೇಕೆಂದು ಕರ್ನಾಟಕ ಮಾಧ್ಯಮಿಕ ಶಿಕ್ಷಣ ಪರೀಕ್ಷಾ ಮಂಡಳಿಯ ( ಕೆಎಸ್ ಇಇಬಿ) ಸಾರ್ವಜನಿಜ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಿದೆ.

ಹಾಲ್ ಟಿಕೆಟ್ ಗಳನ್ನು ಜೂನ್ 29 ರಂದು ಕೆಎಸ್ ಇಇಬಿ ಪೋರ್ಟಲ್ ಗೆ ಅಪ್ ಲೋಡ್ ಮಾಡಲಾಗಿದೆ.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ, ಯಾವುದೇ ವಿದ್ಯಾರ್ಥಿ ಹಾಲ್ ಟಿಕೆಟ್ ಸಿಗದೆ,ಮಾನಸಿಕ ತೊಂದರೆ ಮತ್ತು ಆತಂಕ ಒಳಗಾಗದಂತೆ ಹಾಗೂ ಪರೀಕ್ಷೆಯಿಂದ ವಂಚಿರಾಗದಂತೆ ಜಿಲ್ಲಾ ಉಪ‌ನಿರ್ದೇಶಕರು ( ಆಡಳಿತ) , ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಂಬಂಧ ಪಟ್ಟ ಶಾಲೆಗಳ ಮುಖ್ಯಸ್ಥರು ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *