ಕೆಐಒಸಿಎಲ್ ನಲ್ಲಿ ಉದ್ಯೋಗವಕಾಶ

By | 28/02/2021

ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕುದುರೆಮುಖ ಐರನ್ ಓರ್ ಕಂಪನಿ ಲಿಮಿಟೆಡ್) ( ಕೆಐಒಸಿಎಲ್ ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 4 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 27 ಜನವರಿ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-03-2021

ಕೆಐಒಸಿಎಲ್ ನಲ್ಲಿ ಜನರಲ್ ಮ್ಯಾನೇಜರ್, ಜ್ಯೂನಿಯರ್ ಜನರಲ್ ಮ್ಯಾನೇಜರ್ (2) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಮಾಂಡ್ ಡ್ರಾಫ್ಟ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪಿಡ್ಬ್ಯುಡಿ/ಎಕ್ಸ್ ಸರ್ವಿಸ್ ಮೆನ್ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಉಳಿದ ಎಲ್ಲಾ ಅಭ್ಯರ್ಥಿಗಳು ರೂ.500/- ಅರ್ಜಿ ಶುಲ್ಕ ಪಾವತಿಸ ಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಸಂದರ್ಶನ ದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ : ಜನರಲ್ ಮ್ಯಾನೇಜರ್ (HR) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 55 ವರ್ಷ ಆಗಿರಬೇಕು. ಜ್ಯೂನಿಯರ್ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 53 ವಯೋಮಿತಿ ಇರಬೇಕು.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ,ಪಿಡ್ಬ್ಯುಡಿ ಒಬಿಸಿ ಅಭ್ಯರ್ಥಿಗಳಿಗೆ 8 ವರ್ಷ, ಪಿಡ್ಬ್ಯುಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವಿದ್ಯಾರ್ಹತೆ : ಜನರಲ್ ಮ್ಯಾನೇಜರ್ (ಎಚ್. ಆರ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗ್ರಾಜ್ಯುಯೇಟ್,ಎಂಬಿಎ, ಎಂಎಸ್ ಡಬ್ಲ್ಯೂ ವಿದ್ಯಾರ್ಹತೆ ಹೊಂದಿರಬೇಕು. ಜ್ಯೂನಿಯರ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗ್ರಾಜ್ಯುಯೇಶನ್ ಜೊತೆಗೆ ಮೆಂಬರ್ ಆಫ್ ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ/ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ ಆಫ್ ಇಂಡಿಯಾ ಅರ್ಹತೆ ಹೊಂದಿರಬೇಕು.

ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 1,95,000/- ವೇತನ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ಓನ್ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *