ಕೋಲಾರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 06 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 38 ಅಂಗನವಾಡಿ ಕಾರ್ಯಕರ್ತೆಯರ ಮತ್ತು 133 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ವಿವರಗಳಿಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭಿಕ ದಿನಾಂಕ : 12-08-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-09-2021
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೋಲಾರ ಜಿಲ್ಲಾ ವ್ಯಾಪ್ತಿಯ 06 ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ ಹಾಗೂ ಸಹಾಯಕಿಯರ ಗೌರವ ಸೇವೆಗೆ 18 ರಿಂದ 35 ವರ್ಷದೊಳಗಿನ ಸ್ಥಳೀಯ ( ಅದೇ ಗ್ರಾಮ) ಮಹಿಳಾ ಅಭ್ಯರ್ಥಿಗಳಿಂದ ಈ ಕೆಳಗೆ ತೋರಿಸಲಾದ ನಮೂನೆಯಲ್ಲಿ ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರಾಗಲು ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯಾಗಲು ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ ವಿದ್ಯಾರ್ಹತೆ 9 ನೇ ತರಗತಿ ತೇರ್ಗಡೆಯಾಗಿರಬೇಕು.
ಅಭ್ಯರ್ಥಿಗಳು ತಮ್ಮ ಎಲ್ಲಾ ದಾಖಲಾತಿಗಳೊಂದಿಗೆ ದಿನಾಂಕ 12-08-2021 ರಿಂದ 13-09-2021 ರ ಸಂಜೆ 5.30 ಗಂಟೆಯೊಳಗಾಗಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ನೋಟಿಫಿಕೇಶನ್









Got a Questions?
Find us on Socials or Contact Us and we’ll get back to you as soon as possible.