KPSC Exam : ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಸೆಪ್ಟೆಂಬರ್ 18 ಮತ್ತು 19 ರಂದು ನಡೆಯಲಿರುವ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ( KPSC ) ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮೊಬೈಲ್ ತರಲು ಅವಕಾಶವಿಲ್ಲ ಎಂದು ಹೇಳಿದೆ.

ಸೆ.18 ಮತ್ತು 19 ರಂದು ಕರ್ನಾಟಕ ಲೋಕ ಸೇವಾ ಆಯೋಗದ ವತಿಯಿಂದ ನಡೆಯಲಿರುವ ಸಹಾಯಕರು ಮತ್ತು ದ್ವಿ ದರ್ಜೆ ಸಹಾಯಕ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮತ್ತು ಕೊಠಡಿ ಮೇಲ್ವಿಚಾರಕರು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತರಲು ಅವಕಾಶ ಇರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ‌.

Leave a Comment

error: Content is protected !!