KSCA : ವಿವಿಧ ಹುದ್ದೆ, ಅರ್ಜಿ ಸಲ್ಲಿಸಲು ಜ.12 ಕೊನೆಯ ದಿನಾಂಕ – ಸುದ್ದಿಜಾಲ ನ್ಯೂಸ್

By | 07/01/2022

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ( KSCA) ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : ಚೀಫ್ ಎಕ್ಸಿಕ್ಯೂಟಿವ್ ಅಧಿಕಾರಿ, ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಪರ್ಸೆನಲ್ ಸೆಕ್ರೆಟರಿ, ಸೀನಿಯರ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನೇಮಕಾತಿ ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಹಾಕಬಹುದು.

ವಿದ್ಯಾರ್ಹತೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಮತ್ತು ಸಿಎ ಇಂಟರ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಪಡೆದಿರಬೇಕು.

ವಯೋಮಿತಿ : ಕನಿಷ್ಠ 25 ರಿಂದ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ‌ ಅಲ್ಲಿ ಕೇಳಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇಲ್ ಮಾಡುವ ಮೂಲಕ ಜನವರಿ‌ 12, 2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಇ – ಮೇಲ್ ವಿಳಾಸ : [email protected] ವಿಳಾಸಕ್ಕೆ ಮೇಲ್ ಮಾಡಬೇಕು ‌
ನೋಟಿಫಿಕೇಶನ್ ಈ ಕೆಳಗೆ ನೀಡಲಾಗಿದೆ.

Leave a Reply

Your email address will not be published. Required fields are marked *