ಕ್ರೀಡಾಕೋಟಾದಡಿ ಪಿಸಿ, ಪಿಎಸ್ ಐ ನೇಮಕ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕ್ರೀಡಾಪಟುಗಳಿಂದ, ಪೊಲೀಸ್ ಕಾನ್ಸ್ ಟೇಬಲ್ ( ಸಿವಿಲ್) ಮತ್ತು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಸಿವಿಲ್) ( ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರ ಮಿಕ್ಕುಳಿದ ವೃಂದದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವೃಂದದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಹುದ್ದೆಗಳ ಸಂಖ್ಯೆ : ಒಟ್ಟು 100 ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆ : ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ – 80
ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ – 20

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 31-08-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29-09-2021

ಅರ್ಹತೆಗಳು : ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯು ಪಾಸ್ ಜೊತೆಗೆ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಸಾಧನೆ ಮಾಡಿರಬೇಕು. ಯಾವುದಾದರೂ ಪ್ರಶಸ್ತಿ ಗಳಿಸಿರಬೇಕು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಪದವಿ ಜೊತೆಗೆ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಸಾಧನೆ ಮಾಡಿರಬೇಕು. ಈ ಕುರಿತು ಸಂಪೂರ್ಣ ಅರ್ಹತೆಗಳನ್ನು ವೆಬ್ಸೈಟ್ ನಲ್ಲಿ ನೋಟಿಫಿಕೇಶನ್ ಚೆಕ್ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

error: Content is protected !!