ರಾಜ್ಯ ಪೊಲೀಸ್ ಇಲಾಖೆಯು (KSP) ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) (Residual & Kalyana Karnataka Region) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ ಲೈನ್ ಮುಖಾಂತರ ಸಲ್ಲಿಸಬಹುದಾಗಿದೆ.
ಆನ್ ಲೈನ್ ನಲ್ಲಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಫೆಬ್ರವರಿ 22, 2021 (22.02.2021)ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿ ಶುಲ್ಕ ಪಾವತಿಸಲು ಫೆಬ್ರವರಿ 24, 2021 ಕೊನೆಯ ದಿನವೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಿದ್ಯಾರ್ಹತೆ
ಅಭ್ಯರ್ಥಿಗಳು ಯಾವುದೇ ಡಿಗ್ರಿಯನ್ನು ಹೊಂದಿರಬಹುದು.
ವಯೋಮಿತಿ
ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 21 ವಯಸ್ಸಾಗಿರಬೇಕು. ಗರಿಷ್ಠ ವಯೋಮಿತಿ 30 ವರ್ಷ.
ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 32 ವರ್ಷ.
ಅರ್ಜಿ ಶುಲ್ಕ
ಸಾಮಾನ್ಯ ಅರ್ಹತೆ, ಹಿಂದುಳಿದ ವರ್ಗ, ಪ್ರವರ್ಗ 2ಎ,2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 500 ರೂ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಗೂ ಪ್ರವರ್ಗ -1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ 250ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.









Got a Questions?
Find us on Socials or Contact Us and we’ll get back to you as soon as possible.