KSP : 206 ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ – ಸುದ್ದಿಜಾಲ ನ್ಯೂಸ್

By | 16/12/2021

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹುದ್ದೆಯ ಹೆಸರು : ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ( ಸೀನ್ ಆಫ್ ಕ್ರೈಂ ಆಫೀಸರ್)( SOCO)

ಹುದ್ದೆಗಳ ಸಂಖ್ಯೆ : ಒಟ್ಟು 206

ಮಿಕ್ಕುಳಿದ ವೃಂದ : 176 ಹುದ್ದೆ
ಸ್ಥಳೀಯ ವೃಂದ : 26 ಹುದ್ದೆ

ಉದ್ಯೋಗ ಸ್ಥಳ : ಕರ್ನಾಟಕ

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ ; 17-12-2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-01-2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18-01-2022

ವಿದ್ಯಾರ್ಹತೆ : ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾನಿಲಯದಿಂದ ವಿಧಿವಿಜ್ಞಾನ ವಿಷಯದಲ್ಲಿ ಶೇ. 55 ರಷ್ಟು ಅಂಕಗಳೊಂದಿಗೆ ಪದವಿಯನ್ನು ಹೊಂದಿರಬೇಕು. ಅಥವಾ

ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾನಿಲಯದಿಂದ ವಿಜ್ಞಾನ ವಿಷಯದಲ್ಲಿ ಕನಿಷ್ಠ ಶೇ.55 ರಷ್ಟು ಅಂಕಗಳೊಂದಿಗೆ ಪದವಿಯನ್ನು ಹೊಂದಿರಬೇಕು. ಜೊತೆಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ವಿಧಿ ವಿಜ್ಞಾನ ವಿಷಯದಲ್ಲಿ ಕನಿಷ್ಠ ಶೇ.55 ರಷ್ಟು ಅಂಕಗಳೊಂದಿಗೆ 01 ವರ್ಷ ಡಿಪ್ಲೋಮಾ ಹೊಂದಿರಬೇಕು.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ₹ 37,900 ರಿಂದ ₹ 70,850/- ರ ಶ್ರೇಣಿಯಲ್ಲಿ ವೇತನ ನೀಡಲಾಗುವುದು.

ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ,2a, 2b, 3a, 3b ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾ/ಪ.ಪಂ/ಪ.1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ : ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹ 500/-, ಪ.ಜಾತಿ/ಪ.ಪಂ/ಪ್ರ.1 ಅಭ್ಯರ್ಥಿಗಳಿಗೆ ರೂ.250 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ನಿಗದಿತ ಅರ್ಜಿ ಶುಲ್ಕವನ್ನು ನಗದು/ ಆನ್ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಚೇರಿಗಳಲ್ಲಿ ಅಥವಾ ಹೆಚ್ ಡಿ ಎಫ್ ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *