KSP : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪುರುಷ, ಮಹಿಳಾ ಅಭ್ಯರ್ಥಿಗಳ ಜೊತೆಗೆ ‘ಮಂಗಳಮುಖಿ’ಯರಿಗೆ ಕೂಡಾ ಉದ್ಯೋಗವಕಾಶ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ – ಸುದ್ದಿಜಾಲ ನ್ಯೂಸ್

By | 21/12/2021

ಕರ್ನಾಟಕ, ರಾಜ್ಯದ ಪೊಲೀಸ್ ಇಲಾಖೆಯಲ್ಲಿನ ಖಾಲಿ ಇರುವ ವಿಶೇಷ ಮೀಸಲು ಸಬ್ ಇನ್ಸ್ ಪೆಕ್ಟರ್ ( ಕೆಎಸ್ ಆರ್ ಪಿ ಮತ್ತು ಐಆರ್ ಬಿ) ( ಪುರುಷ, ಮಹಿಳಾ, ಮತ್ತು ತೃತೀಯ ಲಿಂಗ ) ಹಾಗೂ ಸೇವಾನಿರತ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವ್ಯಕ್ತಿಗಳು ಸ್ಥಳೀಯ ವೃಂದದ ಹುದ್ದೆ ಹಾಗೂ ಮಿಕ್ಕುಳಿದ ವೃಂದದ ( ಪರಸ್ಥಳೀಯ) ಹುದ್ದೆ ಈ ಎರಡೂ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಒಂದು ವೇಳೆ ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಅಭ್ಯರ್ಥಿಯು ಪ್ರಸ್ತುತ ನೇಮಕಾತಿಗೆ ಸಂಬಂಧಿಸಿದಂತೆ ಮಿಕ್ಕಿಳಿದ ( ಪರಸ್ಥಳೀಯ) ವೃಂದ್ ಹುದ್ದೆಯನ್ನು ಆಯ್ಕೆ ಮಾಡಿಕೊಂಡು ನೇಮಕಾತಿ ಹೊಂದಿದಲ್ಲಿ ಅಂತಹ ಅಭ್ಯರ್ಥಿಯು ಜಾರಿಯಲ್ಲಿರುವ ನಿಯಮದಂತೆ ತನ್ನ ಸೇವಾ ಅವಧಿಯಲ್ಲಿ ಅನುಚ್ಛೇದ, ಮೀಸಲಾತಿ ಸೌಲಭ್ಯಗಳನ್ನು ಪಡೆಯಲು ಅವಕಾಶವಿರುವುದಿಲ್ಲ.

ಒಟ್ಟು ಹುದ್ದೆ : 70 ಪಿಎಸ್ ಐ ಹುದ್ದೆಗಳು

ವೇತನ ಶ್ರೇಣಿ : ₹ 37,900 ರಿಂದ ₹ 70,850/-

ಅರ್ಜಿ ಶುಲ್ಕ : ಸಾಮಾನ್ಯ ವರ್ಗ, ಪ್ರವರ್ಗ 2 ( ಎ), 2 ( ಬಿ), 3 ( ಎ), 3 ( ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂ. 500/-

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.250/-

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 20.12.2021 ಬೆಳಿಗ್ಗೆ 10.00 ಗಂಟೆಗೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18-01-2022 ಸಂಜೆ 06.00 ಗಂಟೆಗೆ
ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಅಂಚೆ ಕಚೇರಿ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ : 20-01-2022

ತೃತೀಯ ಲಿಂಗ ಅಭ್ಯರ್ಥಿಗಳಿಗೆ : ಭಾರತ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಧಿಸೂಚನೆಯನ್ನು ಕೇಂದ್ರ ಸರಕಾರವು ಹೊರಡಿಸಿರುವ ತೃತೀಯ ಲಿಂಗ ವ್ಯಕ್ತಿಗಳ ( ರಕ್ಷಣಾ ಹಕ್ಕುಗಳು) ನಿಯಮಗಳು 2020 ರನ್ವಯ ಸಂಬಂಧಪಟ್ಟ ಪ್ರಮಾಣ ಪತ್ರವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ರವರಿಂದ ಪಡೆಯತಕ್ಕದ್ದು. ಸದರಿ ಪ್ರಮಾಣ ಪತ್ರ ಹೊಂದಿರದಿದ್ದಲ್ಲಿ ತೃತೀಯ ಲಿಂಗದ ಮೀಸಲಾತಿಗೆ ಪರಿಗಣಿಸಲಾಗುವುದಿಲ್ಲ.

ವಯೋಮಿತಿ : ಸಾಮಾನ್ಯ ಅಭ್ಯರ್ಥಿಗಳಿಗೆ : ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 18-01-2022 ಕ್ಕೆ ಪುರುಷ, ಮಹಿಳಾ ಮತ್ತು ತೃತೀಯ ಲಿಂಗದ ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.

ಪ.ಜಾ/ಪ.ಪಂ/ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.

ಇತರೆ ಅಭ್ಯರ್ಥಿಗಳಿಗೆ 26 ವರ್ಷಗಳು

ಸೇವಾನಿರತ ಅಭ್ಯರ್ಥಿಗಳಿಗೆ : ಪ.ಜಾ/ಪ.ಪಂ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷಗಳು.

ಇತರೆ ಅಭ್ಯರ್ಥಿಗಳಿಗೆ 35 ವರ್ಷಗಳು.

ನೇಮಕಾತಿ ವಿಧಾನ : ದೇಹದಾರ್ಢ್ಯತೆ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ.

ಅರ್ಜಿ ಸಲ್ಲಿಕೆ ವಿಧಾನ : ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗಿದೆ.

ಈ 70 ಹುದ್ದೆಗಳಲ್ಲಿ ನೂತನ ತಿದ್ದುಪಡಿ ಕಾಯ್ದೆಯಂತೆ ಐದು ಹುದ್ದೆಗಳನ್ನು ತೃತೀಯ ಲಿಂಗಿಯರಿಗೆ ಮೀಸಲು ಇಡಲಾಗಿದೆ. ಈ ಮೂಲಕ ಮಂಗಳಮುಖಿಯರಿಗೆ ಪಿಎಸ್ ಐ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸೋದಕ್ಕೆ ಅವಕಾಶವನ್ನು ರಾಜ್ಯ ಸರಕಾರ ನೀಡಿದೆ.

ನೋಟಿಫಿಕೇಶನ್

Leave a Reply

Your email address will not be published. Required fields are marked *